Breaking News

ರಾಜ್ಯದಲ್ಲೂ ಪೆಟ್ರೋಲ್‌ ತೆರಿಗೆ ಕಡಿತ ಸಂಭವ: ಸಿಎಂ ಬೊಮ್ಮಾಯಿ

Spread the love

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆಯನ್ನು ಕೇಂದ್ರ ಇಳಿಕೆ ಮಾಡಿದ ಬೆನ್ನಲ್ಲೇ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನದಲ್ಲಿ ರಾಜ್ಯಗಳು ತೆರಿಗೆ ಇಳಿಕೆ ಮಾಡಿವೆ. ಇದರಿಂದಾಗಿ ಪೆಟ್ರೋಲ್‌ 2 ರೂ ಮತ್ತು ಡೀಸೆಲ್‌ 1 ರೂ. ನಷ್ಟು ಅಗ್ಗವಾಗಿದೆ.

 

ಇದದ ಬೆನ್ನಲ್ಲೇ. ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ತೆರಿಗೆ ಕಡಿಮೆ ಮಾಡಬೇಕು ಎಂಬ ವ್ಯಾಪಕ ಆಗ್ರಹ ಕೇಳಿ ಬಂದಿದೆ. ಹೀಗಾಗಿ, ತೆರಿಗೆ ಇಳಿಕೆ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ದಾವೋಸ್‌ಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲೂ ತೆರಿಗೆ ಇಳಿಕೆ ಕುರಿತು ಪರಿಶೀಲನೆ ನಡೆಸುವ ಭರವಸೆ ನೀಡಿದರು.

‘ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್‌ ಮೇಲಿನ ಎಕ್ಸೈಸ್‌ ಸುಂಕ ಇಳಿಕೆ ಮಾಡಿದೆ. ರಾಜ್ಯದಲ್ಲಿಯೂ ತೆರಿಗೆ ಕಡಿತ ಮಾಡುವ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಈ ಹಿಂದೆಯೂ ಕೇಂದ್ರ ಸರ್ಕಾರ ತೈಲದ ಮೇಲೆ ಸುಂಕ ಕಡಿಮೆ ಮಾಡಿದಾಗ, ರಾಜ್ಯ ಸರ್ಕಾರವೂ ತೆರಿಗೆ ಇಳಿಸಿತ್ತು. ಹಣಕಾಸು ಇಲಾಖೆ ಜತೆ ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳುತ್ತೇನೆ’ ಎಂದರು.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ