ಬೆಂಗಳೂರು: ರಾಜ್ಯವು ಈಗಾಗಲೇ ಮಳೆಯಿಂದ ತತ್ತರಿಸಿದೆ. ಇನ್ನೂ ಮತ್ತೆ ರಾಜ್ಯಾದ್ಯಂತ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದ.
ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮೀನುಗಾರರನ್ನು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಶನಿವಾರ ಮತ್ತು ಭಾನುವಾರ ವರುಣನ ಆರ್ಭಟ ಕೊಂಚ ಕಡಿಮೆಯಾಗಿತ್ತು. ಇನ್ನೂ ಮುಂದಿನ ದಿನಗಳಲ್ಲಿ ರಾಜ್ಯದ ಕೆಲವು ಭಾಗಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Laxmi News 24×7