Breaking News

ವಾಹನಗಳ ನೋಂದಣಿ ಫಲಕಗಳ ಮೇಲೆ ಯಾವುದೇ ಹೆಸರು, ಚಿನ್ನೆ, ಲಾಂಛನ ಹಾಕುವಂತಿಲ್ಲ – ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ

Spread the love

ಬೆಂಗಳೂರು: ರಾಜ್ಯದ ಯಾವುದೇ ವಾಹನಗಳ ನೋಂದಣಿ ಫಲಕಗಳ ಮೇಲೆ ನಿಯಮಬಾಹಿರವಾಗಿ ಪ್ರದರ್ಶಿಸುತ್ತಿರುವ ಸಂಘ, ಸಂಸ್ಥೆಗಳ ಹೆಸರು, ಚಿನ್ನೆ, ಲಾಂಛನವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ತೆರವುಗೊಳಿಸುವಂತ ಗೆಜೆಟ್ ಅಧಿಸೂಚನೆಯಲ್ಲಿ ಖಡಕ್ ಆದೇಶ ಹೊರಡಿಸಿದೆ.

 

 

ಈ ಕುರಿತಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ಕರ್ನಾಟಕ ರಾಜ್ಯಪತ್ರದಲ್ಲಿ ಸುತ್ತೋಲೆ ಹೊರಡಿಸಿದ್ದು, ವಾಹನಗಳ ನೋಂದಣಿ ಸಂಖ್ಯಾ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕಾಗಿರುತ್ತದೆ ಎಂದು ತಿಳಿಸಿದ್ದಾರೆ.

 

ಖಾಸಗಿ ವಾಹನಗಳು ಸರ್ಕಾರದ ಲಾಂಛನ ಮತ್ತು ಹೆಸರುಗಳನ್ನು ವಾಹನಗಳ ಮೇಲೆ ಪ್ರದರ್ಶಿಸುವುದನ್ನು ನಿರ್ಬಂಧಿಸಲಾಗಿದೆ. ತಮ್ಮ ವಾಹನಗಳ ಮೇಲೆ ಸರ್ಕಾರಿ ಲಾಂಛನ ಅಥವಾ ಹೆಸರುಗಳನ್ನು ಅಳವಡಿಸಬೇಕಾದಲ್ಲಿ, ಕೇಂದ್ರ ಸರ್ಕಾರದಿಂದ ಅನುಮತಿ ಪಡೆದುಕೊಳ್ಳುವುದು ಅವಶ್ಯಕವಾಗಿರುತ್ತದೆ ಎಂದಿದ್ದಾರೆ.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ