Breaking News

ಸಿಲಿಕಾನ್‌ ಸಿಟಿ’ಯನ್ನು ‘ಸ್ವಿಮ್ಮಿಂಗ್‌ ಪೂಲ್‌’ ಮಾಡಿದ ಹೆಗ್ಗಳಿಕೆ ‘ಬಿಜೆಪಿ ಸರ್ಕಾರ’ದ್ದು:H.D.K.

Spread the love

ಬೆಂಗಳೂರು: ಸಿಲಿಕಾನ್‌ ಸಿಟಿಯನ್ನು ( Silicon City ) ಸ್ವಿಮ್ಮಿಂಗ್‌ ಪೂಲ್‌ ಮಾಡಿದ ಹೆಗ್ಗಳಿಕೆ ಬಿಜೆಪಿ ಸರಕಾರಕ್ಕೇ ( BJP Government ) ಸಲ್ಲಬೇಕು. ಅಭಿವೃದ್ಧಿಯಲ್ಲಿ ಕ್ಷೇತ್ರವಾರು ತಾರತಮ್ಮ ಮಾಡಿ, ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿ ಖಂಡನೀಯ.

'ಬೇಸಿಗೆ ಮಳೆ' ಅವಾಂತರ: ಬೆಂಗಳೂರಿನಲ್ಲಿ 'ಭಾರೀ ಮಳೆ'ಗೆ ಹಾನಿಯಾದ ಮನೆಗಳು ಎಷ್ಟು ಗೊತ್ತಾ.?

ಅನುದಾಲದ ಹೊಳೆ ಹರಿದ ಕ್ಷೇತ್ರಗಳೇ ಈಗ ನೀರಿನಲ್ಲಿ ತೇಲುತ್ತಿವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( HD Kumaraswamy ) ವಾಗ್ದಾಳಿ ನಡೆಸಿದ್ದಾರೆ.

 

 

ಈ ಕುರಿತು ಸರಣಿ ಟ್ವಿಟ್ ( Twitter ) ಮಾಡಿರುವ ಅವರು, ಚಿಕ್ಕಬೆಟ್ಟಹಳ್ಳಿಗೆ ಒಂದು ತಿಂಗಳ ಒಳಗಾಗಿ ಮೂಲಸೌಕರ್ಯ ಕಲ್ಪಿಸುವ ಕೆಲಸಗಳು ಶುರುವಾಗಬೇಕು. ತಪ್ಪಿದರೆ ಖುದ್ದು ನಾನೇ ಅಲ್ಲಿಗೆ ಹೋಗಿ ಧರಣಿ ಕೂರಬೇಕಾಗುತ್ತದೆ. ಜಾತಿ, ಧರ್ಮದ ಹೆಸರಿನಲ್ಲಿ ಅಭಿವೃದ್ಧಿ ತಾರತಮ್ಯ ಮಾಡುವುದು ಹೇಯ, ರಾಕ್ಷಸಿ ಮನಸ್ಥಿತಿ ಎನ್ನದೇ ವಿಧಿ ಇಲ್ಲ ಎಂದಿದ್ದಾರೆ.

 

 

ಸರ್ವ ಜನಾಂಗದ ಜನರನ್ನು ಸಮಭಾವದಿಂದ ಕಂಡು ಸರ್ವ ಜನಾಂಗದ ತೋಟ ನಿರ್ಮಿಸಿದ್ದರು ನಾಡಪ್ರಭು ಕೆಂಪೇಗೌಡರು. ಪ್ರಭುಗಳು ಕಟ್ಟಿದ ಬೆಂಗಳೂರಿನ ( Bengaluru ) ಯಲಹಂಕದಲ್ಲಿ ಅಭಿವೃದ್ಧಿ ವಿಚಾರದಲ್ಲಿ ನಿರ್ದಿಷ್ಟವಾಗಿ ಒಂದು ಸಮುದಾಯವನ್ನೇ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿ, ಅವರು ವಾಸಿಸುವ ಬಡಾವಣೆಯನ್ನು ಕಡೆಗಣಿಸಿ ಅವರನ್ನು ಟಾರ್ಗೆಟ್‌ ಮಾಡಲಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಖಾಸಗಿ ಲಾಡ್ಜ್​​ನಲ್ಲಿ ಪಿಎಸ್​ಐ ಆತ್ಮಹತ್ಯೆ

Spread the love ತುಮಕೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪೊಲೀಸ್​​ ಸಬ್ ಇನ್ಸ್​ಪೆಕ್ಟರ್​​ವೊಬ್ಬರು ನಗರದ ಖಾಸಗಿ ಲಾಡ್ಜ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ