ರಾಜ್ಯದಲ್ಲಿ ವಾಯುವ್ಯ ಪದವೀಧರ, ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಹೌದು ಬೆಳಗಾವಿ ನಗರದ ಖಾಸಗಿ ಹೋಟಲ್‌ನಲ್ಲಿ ರಾಜ್ಯದಲ್ಲಿ ನಡೆಯಲಿರುವ ಪರಿಷತ್ ಚುನಾವಣೆ ಕುರಿತಂತೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಭೆಯಲ್ಲಿ, ಮಾಜಿ ಸಚಿವ ಎ ಬಿ ಪಾಟೀಲ್, ವೀರಕುಮಾರ್ ಪಾಟೀಲ್ ಭಾಗಿ ಮೊದಲಾದ ಕಾಂಗ್ರೆಸ್ ಹಿರಿಯ ನಾಯಕರು ಭಾಗಿಯಾಗಿದ್ದರು. ಈ ವೇಳೆ ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಹಾಗೂ ಮಹಾಂತೇಶ ಕೌಜಲಗಿ ಮೊದಲಾದ ಕಾಂಗ್ರೆಸ್ ಶಾಸಕರು ಸಭೆಯಲ್ಲಿ ಗೈರಾಗಿದ್ದರು. ಪರಿಷತ್ ಚುನಾವಣೆಗೆ ಮೇ ೨೫ಕ್ಕೆ ನಾಮಪತ್ರ ಸಲ್ಲಿಕೆಗೆ ಈ ವೇಳೆ ನಿರ್ಧಾರ ತೆಗೆದುಕೊಳ್ಳಲಾಯಿತು. ಈ ವೇಳೆ ಪರಿಷತ್ನ ಕಾಂಗ್ರೆಸ್ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಮಾಜಿ ಸಚಿವ ಪ್ರಕಾಶ ಹುಕ್ಕೇರಿ, ಪದವೀಧರ ಕ್ಷೇತ್ರದ ಅಭ್ಯರ್ಥಿ ಸುನಿಲ್ ಸಂಕ ಭಾಗಿಯಾಗಿದ್ದರು.
ಈ ವೇಳೆ ಸಭೆಯÀನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಈಗಾಗಲೇ ಹಿರಿಯರು ಮುಂಬರು ಪರಿಷತ್ ಚುನಾವಣೆ ಕುರಿತಂತೆ ನಮ್ಮ ಚುನಾವಣಾ ತಣತಂತ್ರಗಳು ಹೇಗಿರಬೇಕು. ಹಿಂದಿನ ಅನುಭವಗಳು, ಹಾಗೂ ಮುಂಬರು ಚುನಾವಣೆ ಕುರಿತಂತೆ ಹಿರಿಯರು ಸಾಕಷ್ಟು ಮಾಹಿತಿಯನ್ನು ಹೇಳಿದ್ದಾರೆ. ಪಕ್ಷದ ಕಾರ್ಯಕರ್ತರು ಕೆಲ ಉತ್ತಮ ಮಾಹಿತಿಯನ್ನು ನೀಡಿದ್ದಾರೆ. ಈ ಎಲ್ಲಾ ಸಲಹೆಗಳನ್ನು ನಮ್ಮ ಅಭ್ಯರ್ಥಿಗಳು ಪಾಲಿಸಿದರೆ ಗೆಲುವು ಸುಲಭವಾಗುತ್ತದೆ. ಹಾಗಾಗಿ ಈ ಹಿನ್ನೆಲೆಯಲ್ಲಿ ಇಂದು ಮಹತ್ವದ ಸಭೆಯನ್ನು ಮಾಡಲಾಗುತ್ತಿದೆ ಎಂದರು.
ಇದೇ ವೇಳೆ ಮುಂದುವರೆದು ಮಾತನಾಡಿದ ಅವರು, ಚುನಾವಣೆ ಎಂದರೆ ಒಂದು ಕಲೆ ಇದ್ದಂv.ೆ ಇದರಲ್ಲಿ ಬಹಳಷ್ಟು ಉಟ ಮಾಡಿದರೆ ಶಕ್ತಿ ಬರುತ್ತೆ ಅನ್ನೋ ಹಾಗಿಲ್ಲ. ಇದು ಒಂದು ಕಲೆಯಾಗಿದೆ.ಈ ವೇಳೆ ನಮ್ಮ ಅಭ್ಯರ್ತಿಗಳು ಸಾಕಷ್ಟು ಕೆಲಸ ಮಾಡಿದ್ದಾರೆ.