ದಾವೋಸ್ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ವಿವಿಧ ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.
ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ ಅವರು ಇಂದು ಎಬಿಇನ್ ಬೇವ್ ಸಂಸ್ಥೆಯ ನಿಯಂತ್ರಣ ಮತ್ತು ಸಾರ್ವಜನಿಕ ನೀತಿ ಜಾಗತಿಕ ಉಪಾಧ್ಯಕ್ಷ ಆಂಡ್ರೆಸ್ ಪೆನಾತೆ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ಚರ್ಚಿಸಿದರು. ರಾಜ್ಯ ಸರ್ಕಾರ ಉದ್ಯಮ ಸ್ಥಾಪನೆಗೆ ಸಂಬಂಧಿಸಿದಂತೆ ನೀಡುತ್ತಿರುವ ವಿಶೇಷ ಸವಲತ್ತುಗಳು ಹಾಗೂ ರಿಯಾಯಿತಿಗಳ ಬಗ್ಗೆ ವಿವರಿಸಿದರು.
Laxmi News 24×7