Breaking News

ಧಾರವಾಡದ ಬಾಡಾದಲ್ಲಿ ನಡೆದ ಭೀಕರ ಅಪಘಾತ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ರಸ್ತೆ ಅಪಘಾತ ಹುಬ್ಬಳ್ಳಿಯಲ್ಲಿ

Spread the love

ಹುಬ್ಬಳ್ಳಿ: ಧಾರವಾಡದ ಬಾಡಾದಲ್ಲಿ ನಡೆದ ಭೀಕರ ಅಪಘಾತ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ರಸ್ತೆ ಅಪಘಾತ ಹುಬ್ಬಳ್ಳಿಯಲ್ಲಿ ನಡೆದಿದ್ದು, 7 ಮಂದಿ ಅಸುನೀಗಿದ್ದಾರೆ. 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ.

ಅಪಘಾತವು ಹುಬ್ಬಳ್ಳಿಯ ಗೋಕುಲ್ ರಸ್ತೆಯ ರಾಯನಾಳ ರಸ್ತೆಯಲ್ಲಿ ತಡರಾತ್ರಿ 12.45ರ ಸುಮಾರಿಗೆ ನಡೆದಿದೆ. ಕೊಲ್ಲಾಪುರದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಅಕ್ಕಿ ತುಂಬಿದ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಡ್ರೈವರ್, ಕ್ಲೀನರ್ ಹಾಗೂ ಬಸ್​ನಲ್ಲಿದ್ದ ಐವರು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ.

6 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ನ್ಯಾಷನಲ್ ಟ್ರಾವೆಲ್ಸ್​ನ KA 51 AA 7146 ನಂಬರ್ ಬಸ್ ಹಾಗೂ MH 16 AY 6916 ಲಾರಿ ಮಧ್ಯೆ ಅಪಘಾತ ನಡೆದಿದೆ. 25ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ