Breaking News

ರಾಜ್ಯದಲ್ಲಿ ಅಮಿತ್ ಶಾ ಸೀಕ್ರೆಟ್ ಸರ್ವೇ, 30 ಬಿಜೆಪಿ ಶಾಸಕರ ಕೈತಪ್ಪಲಿದೆಯೇ ಟಿಕೆಟ್..

Spread the love

ಬೆಂಗಳೂರು,ಮೇ23 – ರಾಜ್ಯ ವಿಧಾನಸಭೆ ಚುನಾವಣೆಗೆ ಕೇವಲ ಒಂದೇ ವರ್ಷ ಬಾಕಿಯಿದ್ದು, ರಾಜ್ಯದಲ್ಲಿ ಸ್ವತಂತ್ರವಾಗಿ ಪಕ್ಷವನ್ನು ಅಧಿಕಾರಕ್ಕೆ ತರಲು ಬಿಜೆಪಿ ಹೈಕಮಾಂಡ್ ತನ್ನದೇ ಆದ ಕಾರ್ಯತಂತ್ರ ರೂಪಿಸಿದೆ.

ರಾಜ್ಯದ 30 ಕ್ಷೇತ್ರಗಳಲ್ಲಿರುವ ಬಿಜೆಪಿಯ ಹಾಲಿ ಶಾಸಕರಿಗೆ ಕೋಕ್ ನೀಡಿ, ಹೊಸ ಮುಖಗಳಿಗೆ ಟಿಕೆಟ್ ನೀಡಲು ಗಂಭೀರ ಚಿಂತನೆ ಪಕ್ಷದಲ್ಲಿ ನಡೆದಿವೆ ಎಂದು ಬಿಜೆಪಿ ಉನ್ನತ ಮೂಲಗಳು ಖಚಿತಪಡಿಸಿವೆ.

ಕೇಂದ್ರ ಗೃಹಸಚಿವ ಅಮಿತ್ ಶಾ ಸೂಚನೆ ಮೇರೆಗೆ ಖಾಸಗಿ ಏಜೆನ್ಸಿಯ 150 ಸದಸ್ಯರು ರಾಜ್ಯದಲ್ಲಿ ಠಿಕಾಣಿ ಹೂಡಿ ಸಮೀಕ್ಷೆ ನಡೆಸಿದ್ದಾರೆ. ಮೇ 1ರಂದು ರಾಜ್ಯಕ್ಕೆ ಭೇಟಿ ನೀಡಿದ್ದ ಈ ತಂಡ ಮೇ 15ರವರೆಗೆ ಪ್ರತಿ ವಿಧಾನಸಭೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದು, ಗೌಪ್ಯವಾಗಿ ನಡೆದ ಸಮೀಕ್ಷಾ ವರದಿಯನ್ನು ಕೇಂದ್ರ ಸಚಿವ ಅಮಿತ್ ಶಾಗೆ ಸಲ್ಲಿಸಿದೆ ಎಂದು ಹೇಳಲಾಗಿದೆ.

ಕಳೆದೊಂದು ದಶಕದಿಂದ ದೇಶದಲ್ಲಿ ಬಿಜೆಪಿ ವರ್ಚಸ್ಸು ಹೆಚ್ಚಿದೆ. ಹಲವು ರಾಜ್ಯಗಳಲ್ಲಿ ಬಿಜೆಪಿ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿದೆ. ದಕ್ಷಿಣ ಭಾರತದಲ್ಲಿ ಕರ್ನಾಟಕ ಬಿಟ್ಟರೆ ಬೇರೆ ರಾಜ್ಯಗಳಲ್ಲಿ ಬಿಜೆಪಿ ಸಂಘಟನಾತ್ಮಕವಾಗಿ ಬೆಳೆದಿಲ್ಲ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ತರಲು ಬಿಜೆಪಿ ಮೆಗಾ ಪ್ಲ್ಯಾನ್ ಮಾಡಿದೆ. ಅದಕ್ಕಾಗಿಯೇ ಅಮಿತ್ ಶಾ ರಾಜ್ಯದಲ್ಲಿ ಖಾಸಗಿ ಏಜೆನ್ಸಿಯಿಂದ ಸರ್ವೆ ಮಾಡಿಸಿದ್ದಾರೆ ಎನ್ನಲಾಗುತ್ತದೆ.

ಸಮೀಕ್ಷಾ ವರದಿ ಅಮಿತ್ ಶಾ ಕೈ ಸೇರಿದ್ದು, ರಾಜ್ಯದ 30 ಕ್ಷೇತ್ರದ ಹಾಲಿ ಶಾಸಕರಿಗೆ ಮುಂದಿನ ಚುನಾವಣೆಯಲ್ಲಿ ಕೋಕ್ ನೀಡಬೇಕು ಹಾಗೂ ಹೊಸ ಮುಖಗಳಿಗೆ ಅವಕಾಶ ನೀಡಬೇಕು. ಅದರಿಂದ ಬಿಜೆಪಿ ಮತ್ತಷ್ಟು ಸಂಘಟನಾತ್ಮಕವಾಗಿ ಬೆಳೆಯಲು ಅನುಕೂಲವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಜನರ ಸಮಸ್ಯೆಗೆ ಸ್ಪಂದಿಸದ, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸದ, ಸಂಘಟನೆಯಲ್ಲಿ ತೊಡಗದ ರಾಜ್ಯದ 30 ಹಾಲಿ ಶಾಸಕರನ್ನು ಈ ತಂಡ ಪಟ್ಟಿ ಮಾಡಿದೆ. ಮುಂದಿನ ಚುನಾವಣೆಯಲ್ಲಿ ಇವರಿಗೆ ಟಿಕೆಟ್ ನೀಡಿದರೆ ಅಲ್ಲಿ ಪಕ್ಷಕ್ಕೆ ಹಿನ್ನಡೆ ಆಗಲಿದೆ ಎಂದೂ ಈ ತಂಡ ವರದಿಯಲ್ಲಿ ಸಲಹೆ ನೀಡಿದೆ ಎಂದು ಮೂಲಗಳು ಖಚಿತಪಡಿಸಿವೆ.

ಖಾಸಗಿ ಏಜೆನ್ಸಿ ನೀಡಿದ ವರದಿ ಅನುಷ್ಠಾನವಾದರೆ ರಾಜ್ಯದ 30 ಹಾಲಿ ಬಿಜೆಪಿ ಶಾಸಕರು ಮುಂದಿನ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಕಾರ್ಯಕರ್ತರಿಗೆ ಹೊಡೆಯುತ್ತಾ ಲಾಟರಿ?:
ರಾಜ್ಯದ ಹಾಲಿ ಬಿಜೆಪಿ ಶಾಸಕರಿರುವ 30 ಕ್ಷೇತ್ರದ ಅಭ್ಯರ್ಥಿಗಳು ಬದಲಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಪಕ್ಷಕ್ಕಾಗಿ ದುಡಿಯುತ್ತಿರುವ ಕಾರ್ಯಕರ್ತರನ್ನು ಪರಿಗಣಿಸುತ್ತಾರೆ ಎಂದೇ ಹೇಳಲು ಆಗಲ್ಲ. ಹಾಗಂತಾ ಬಿಡಬಹುದು ಎಂದೇನಿಲ್ಲ. ಕೆಲ ಕ್ಷೇತ್ರದಲ್ಲಿ ಕಾರ್ಯಕರ್ತರಿಗೆ ಮಣೆ ಹಾಕಬಹುದು.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ