Breaking News
Home / ಜಿಲ್ಲೆ / ಬೆಳಗಾವಿ / ನೇಮಕಾತಿಗೆ ಗ್ರಹಣ, ಅಭ್ಯರ್ಥಿಗಳು ಹೈರಾಣ

ನೇಮಕಾತಿಗೆ ಗ್ರಹಣ, ಅಭ್ಯರ್ಥಿಗಳು ಹೈರಾಣ

Spread the love

ಬೆಳಗಾವಿ: ‘ನೇಮಕ ಪ್ರಕ್ರಿಯೆ ಆರಂಭಗೊಂಡು ನಾಲ್ಕು ವರ್ಷ ಕಳೆದರೂ ಮುಗಿಯುವ ಸೂಚನೆಗಳಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ವಿಚಾರಿಸಿದರೆ ನಿಖರವಾಗಿ ಮಾಹಿತಿಯನ್ನೂ ನೀಡುತ್ತಿಲ್ಲ. ದಿಕ್ಕೇ ತೋಚದಂತಾಗಿದೆ…’

-ಇದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಲ್ಲಿ (ಕೆಎಸ್‌ಆರ್‌ಟಿಸಿ) ಖಾಲಿ ಇರುವ ತಾಂತ್ರಿಕ ಸಹಾಯಕರು ಹಾಗೂ ಭದ್ರತಾ ರಕ್ಷಕ ಹುದ್ದೆಗಳಿಗೆ ಪರೀಕ್ಷೆ ಬರೆದಿರುವ ಉದ್ಯೋಗ ಆಕಾಂಕ್ಷಿಗಳ ಅಳಲು.

 

ಕೋವಿಡ್‌-19 ಸಂಕಷ್ಟದಿಂದಾಗಿ ಉಂಟಾಗಿರುವ ಆರ್ಥಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಈ ನೇಮಕಾತಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಇದರಿಂದಾಗಿ, ರಾಜ್ಯದಾದ್ಯಂತ ಸಾವಿರಾರು ಅಭ್ಯರ್ಥಿಗಳು ಅತಂತ್ರರಾಗಿದ್ದಾರೆ.

‘ಕೋವಿಡ್‌ ನಂತರದ ಆರ್ಥಿಕ ಸಂಕಷ್ಟದ ಕಾರಣಕ್ಕೆ ನೇಮಕಾತಿ ತಡೆಹಿಡಿಯಲಾಗಿದೆ ಎಂದು ಕೆಎಸ್‌ ಆರ್‌ಟಿಸಿ ಹೇಳುತ್ತಿದೆ. ಆದರೆ, ಈಗ ಕೋವಿಡ್‌ ಪರಿಣಾಮ ತಗ್ಗಿದೆ. ನಿಗಮಕ್ಕೆ ಆದಾಯ ಬರುತ್ತಿದೆ. ಹಾಗಾಗಿ ನೇಮಕ ಪ್ರಕ್ರಿಯೆ ಮರು ಆರಂಭಿಸಬೇಕು’ ಎಂಬುದು ಅವರ ಒತ್ತಾಯ.

2018ರಲ್ಲೇ ಅರ್ಜಿ ಆಹ್ವಾನಿಸಿತ್ತು: 2018ರ ಮಾರ್ಚ್‌-ಏ‍ಪ್ರಿಲ್‌ನಲ್ಲಿ 726 ತಾಂತ್ರಿಕ ಸಹಾಯಕ ಹಾಗೂ 200 ಭದ್ರತಾ ರಕ್ಷಕ ಹುದ್ದೆಗಳ ನೇಮಕಾತಿಗೆ ಕೆಎಸ್‌ಆರ್‌ಟಿಸಿ ಅರ್ಜಿ ಆಹ್ವಾನಿಸಿತ್ತು. ರಾಜ್ಯದಾದ್ಯಂತ ಸುಮಾರು 50 ಸಾವಿರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. 2020ರ ಫೆಬ್ರುವರಿಯಲ್ಲಿ ಪರೀಕ್ಷೆ ನಡೆದಿತ್ತು. ಅಂದುಕೊಂಡಂತೆ ಆಗಿದ್ದರೆ, ಈ ವೇಳೆಗೆ ನೇಮಕ ಪ್ರಕ್ರಿಯೆ ಪೂರ್ಣವಾಗಿ ಆಯ್ಕೆಯಾದವರು ನೌಕರಿ ಆರಂಭಿಸಬೇಕಿತ್ತು. ಆದರೆ, ಈವರೆಗೆ ಪ್ರಕ್ರಿಯೆ ಮುಗಿಯದಿರುವುದು ಅಭ್ಯರ್ಥಿಗಳ ಗೊಂದಲಕ್ಕೆ ಕಾರಣ ವಾಗಿದೆ.

ತ್ವರಿತವಾಗಿ ಮುಗಿದಿದ್ದರೆ ಅನುಕೂಲ: ‘ನಾಲ್ಕು ವರ್ಷಗಳಿಂದ ಚಾತಕಪಕ್ಷಿ ಯಂತೆ ಕಾಯುತ್ತಿದ್ದೇವೆ. ಸಾರಿಗೆ ನಿಗಮ ದಲ್ಲೂ ಸಿಬ್ಬಂದಿ ಕೊರತೆ ಹೆಚ್ಚಿದೆ. ತ್ವರಿತ ವಾಗಿ ನೇಮಕಾತಿ ಪೂರ್ಣಗೊಳಿಸಿ ಆಯ್ಕೆಯಾದವರಿಗೆ ಆದೇಶ ನೀಡು ವಂತೆ ಸಾರಿಗೆ ಸಚಿವರು ಹಾಗೂ ನಿಗಮದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ, ಸ್ಪಂದನೆ ಸಿಕ್ಕಿಲ್ಲ’ ಎಂದು ಬೆಳಗಾವಿ ಜಿಲ್ಲೆಯ ಆಕಾಂಕ್ಷಿಗಳು ‘ಪ್ರಜಾವಾಣಿ’ ಎದುರು ಅಳಲು ತೋಡಿಕೊಂಡರು.

 


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ