Breaking News

5 ರೂಪಾಯಿ ಡಾಕ್ಟರ್ ಎಂದೇ ಖ್ಯಾತರಾದ ಡಾ.ಶಂಕರೇಗೌಡರಿಗೆ ಹೃದಯಾಘಾತ!?

Spread the love

ಮಂಡ್ಯ: ಐದು ರೂಪಾಯಿ ಡಾಕ್ಟರ್​ ಎಂದೇ ಖ್ಯಾತರಾಗಿರುವ ಡಾ.ಶಂಕರೇಗೌಡರಿಗೆ ಲಘು ಹೃದಯಾಘಾತವಾಗಿದೆ. ಸದ್ಯ ಅವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇತ್ತೀಚಿಗಿನ ವರದಿ ಪ್ರಕಾರ ಶಂಕರೇಗೌಡರ ಆರೋಗ್ಯ ಸುಧಾರಿಸಿಕೊಳ್ಳುತ್ತಿದೆ.

ಅಪೊಲೋದ ತಜ್ಞ ವೈದ್ಯರಿಂದ ಚಿಕಿತ್ಸೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ. ಒಂದು ವಾರದ ಬಳಿಕ ಬೈಪಾಸ್ ಸರ್ಜರಿ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಡಾ. ಶಂಕರೇಗೌಡ ಅವರು ಮಂಡ್ಯದ ಚರ್ಮ ರೋಗ ತಜ್ಞರಾಗಿದ್ದು, ಭಾರೀ ಜನಪ್ರಿಯತೆಯನ್ನ ಗಳಿಸಿದ್ದಾರೆ. ಮಂಡ್ಯದಲ್ಲಿರುವ ತಾರಾ ಕ್ಲಿನಿಕ್ ನಲ್ಲಿ ಇವರು ಚಿಕಿತ್ಸೆಯ ಶುಲ್ಕವಾಗಿ​ ನಲ್ಲಿ ಕೇವಲ 5 ರೂಪಾಯಿ ಮಾತ್ರ ಪಡೆಯುತ್ತಾರೆ. ಇನ್ನು ಹುಟ್ಟೂರು ಶಿವಳ್ಳಿಗೆ ಬಂದ ರೋಗಿಗಳಿಗೆ ಯಾವುದೇ ಶುಲ್ಕ ಪಡೆಯುವುದಿಲ್ಲ. ಹೀಗಾಗಿ ಜನ ಇವರನ್ನು ಐದು ರೂಪಾಯಿ ವೈದ್ಯರಂದೇ ಕರೆಯುತ್ತಾರೆ.

ಇನ್ನು ಈ ಬಗ್ಗೆ ಶಂಕರೇಗೌಡ ಅವರ ಪತ್ನಿ ರುಕ್ಮಿಣಿ ಮಾತನಾಡಿದ್ದು, ‘ನನ್ನ ಪತಿಯ ಆರೋಗ್ಯ ಸ್ಥಿರವಾಗಿದೆ. ಗಾಳಿ ಸುದ್ದಿಗೆ ಕಿವಿಗೊಡಬೇಡಿ. ಯಾವುದೇ ಸುಳ್ಳು ಸುದ್ದಿಯನ್ನು ಹಬ್ಬಿಸಬೇಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ