ಭ್ರಷ್ಟಾಚಾರದ ಆರೋಪದ ಮೇಲೆ ಆರೋಗ್ಯ ಸಚಿವ ವಿಜಯ್ ಸಿಂಘ್ಲಾ ಅವರನ್ನು ಪಂಜಾಬ್ ಮುಖ್ಯಮಂತ್ರಿ ಭಗವತ್ ಮನ್ ವಜಾಗೊಳಿಸಿದ ಬೆನ್ನಲ್ಲೇ ಪೊಲೀಸರು ಬಂಧಿಸಿದ್ದಾರೆ.
ಪಂಜಾಬ್ ನಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಆಮ್ ಆದ್ಮಿ ೨ ತಿಂಗಳು ಪೂರೈಸುವ ಮುನ್ನವೇ ಭ್ರಷ್ಟಾಚಾರ ಆರೋಪದಿಂದ ತತ್ತರಿಸಿದ್ದು, ೨ ತಿಂಗಳಲ್ಲೇ ಮೊದಲ ವಿಕೆಟ್ ಪತನಗೊಂಡಂತಾಗಿದೆ.
ಗುತ್ತಿಗೆದಾರರಿಂದ ಶೇ.೧ರಷ್ಟು ಲಂಚ ಕೇಳಿದ್ದಾರೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಆರೋಗ್ಯ ಸಚಿವ ವಿಜಯ್ ಸಿಂಘ್ಲಾ ಅವರನ್ನು ಸಂಪುಟದಿಂದ ವಜಾಮಾಡಲಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿದ್ದಾಗಿ ಸಿಎಂ ಭಗವತ್ ಮನ್ ತಿಳಿಸಿದ್ದಾರೆ
Laxmi News 24×7