Breaking News

ದುಬಾರಿಯಾಗಲಿವೆ ಎಲ್ಲಾ ಮೊಬೈಲ್ ರೀಚಾರ್ಜ್ ಪ್ಲಾನ್‌ಗಳು

Spread the love

ನವದೆಹಲಿ, ಮೇ 24: ಕಳೆದ ವರ್ಷವಷ್ಟೇ ಶೇ. 25ರವರೆಗೂ ರೀಚಾರ್ಜ್ ಪ್ಲಾನ್ ದರಗಳನ್ನು ಏರಿಸಿದ್ದ ಟೆಲಿಕಾಂ ಆಪರೇಟರ್‌ಗಳು ಈಗ ಒಂದೇ ವರ್ಷದ ಅಂತರದಲ್ಲಿ ಮತ್ತೊಮ್ಮೆ ಭಾರೀ ಏರಿಕೆಗೆ ಮುಂದಾಗುತ್ತಿವೆ. ಮುಂದಿನ ದಿನಗಳಲ್ಲಿ ಮೊಬೈಲ್ ರೀಚಾರ್ಜ್ ಪ್ಲಾನ್‌ಗಳು ಶೇ.

10-12ರಷ್ಟು ದುಬಾರಿಯಾಗಲಿವೆ. ನವೆಂಬರ್‌ನಲ್ಲಿ ಬರಲಿರುವ ದೀಪಾವಳಿ ಹಬ್ಬದಷ್ಟರಲ್ಲಿ ತಮ್ಮ ಪ್ರೀಪೇಯ್ಡ್ ದರಗಳನ್ನು ಏರಿಸಲು ಭಾರ್ತಿ ಏರ್ಟೆಲ್, ರಿಲಾಯನ್ಸ್ ಜಿಯೋ ಮತ್ತು ವೊಡಫೋನ್ ಐಡಿಯಾ ಸಂಸ್ಥೆಗಳು ನಿರ್ಧರಿಸಿವೆ. 2021ರ ನವೆಂಬರ್ ತಿಂಗಳಲ್ಲೇ ಈ ಕಂಪನಿಗಳು ತಮ್ಮ ಪ್ರೀಪೇಯ್ಡ್ ದರಗಳನ್ನು ಶೇ. 20-25ರಷ್ಟು ಏರಿಕೆ ಮಾಡಿದ್ದವು.

ಟೆಲಿಕಾಂ ಕಂಪನಿಗಳು ಲಾಭಕ್ಕಾಗಿ ಪರದಾಡುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಿವೆ. ಇದರಿಂದ ಪ್ರತೀ ಬಳಕೆದಾರನಿಂದ ಸಿಗುವ ಸರಾಸರಿ ಅದಾಯ (ARPU) ಹೆಚ್ಚಳವಾಗುವ ನಿರೀಕ್ಷೆ ಇಟ್ಟುಕೊಂಡಿವೆ ಈ ಕಂಪನಿಗಳು.


Spread the love

About Laxminews 24x7

Check Also

ಪ್ರಜಾಪ್ರಭುತ್ವ ಉಳಿವಿಗೆ ದೇಶದ ಜನ ಒಂದಾಗಿ: ಮಲ್ಲಿಕಾರ್ಜುನ ಖರ್ಗೆ

Spread the love ನವದೆಹಲಿ: ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇದು ಕೇಂದ್ರ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ