Breaking News

ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ 108 ಸಿಬ್ಬಂದಿ

Spread the love

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಬೆಳಗುರ್ಕಿ ಗ್ರಾಮದ ಗರ್ಭಿಣಿಗೆ ಆಸ್ಪತ್ರೆ ಮಾರ್ಗ ಮಧ್ಯೆಯೇ ಆಂಬ್ಯುಲೆನ್ಸ್‍ನಲ್ಲಿ ಹೆರಿಗೆಯಾಗಿದೆ.

ಹೆರಿಗೆ ನೋವು ತೀವ್ರವಾಗಿ ಕಾಣಿಸಿಕೊಂಡಿದ್ದರಿಂದ 108 ಸಿಬ್ಬಂದಿ ಹೆರಿಗೆ ಮಾಡಿಸಿದ್ದಾರೆ. ಪ್ರಸ್ತುತ ತಾಯಿ ಪಾರ್ವತಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.  ತಾಯಿ-ಮಗಳು ಆರೋಗ್ಯವಾಗಿ ಇದ್ದಾರೆ.

ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಬಾದರ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿತ್ತು. ಆದರೆ ಆಸ್ಪತ್ರೆ ಮಾರ್ಗ ಮಧ್ಯೆದಲ್ಲೇ ನೋವು ತೀವ್ರಗೊಂಡಿದ್ದರಿಂದ ಶುಶ್ರೂಷಕ ಬಸವರಾಜ್ ಮಾರ್ಗ ಮಧ್ಯೆ ಆಂಬ್ಯುಲೆನ್ಸ್‌ನಲ್ಲೇ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ