Breaking News

ಬೆಂಗಳೂರಿನಲ್ಲಿ ಐಕಿಯ ಸ್ಟೋರ್:ಸಿಇಓ ಜೆಸ್ಪರ್ ಬ್ರಾಡಿನ್ ಜತೆ ಸಿಎಂ ಚರ್ಚೆ

Spread the love

ದಾವೋಸ್ : ಇಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಇಂಗ್ಕಾ ಗ್ರೂಪ್ (ಐಕಿಯ) ಸಿಇಓ ಜೆಸ್ಪರ್ ಬ್ರಾಡಿನ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

 

ಜೂನ್ ನಲ್ಲಿ ನಾಗಸಂದ್ರದಲ್ಲಿ ಐಕಿಯ ಸ್ಟೋರ್ ತೆರೆಯಲಿದ್ದು, ಜೆಸ್ಪರ್ ಬ್ರಾಡಿನ್ ಅವರು ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಐಕಿಯದ ಭಾರತೀಯ ಕೇಂದ್ರ ಕಚೇರಿಯೂ ಬೆಂಗಳೂರಿನಲ್ಲಿದ್ದು ಪೀಠೋಪಕರಣಗಳ ತಯಾರಿಕೆಯ ಸಂದರ್ಭದಲ್ಲಿ ಬಿದಿರು ಮತ್ತಿತರ ಸ್ಥಳೀಯ ವಸ್ತುಗಳ ವ್ಯಾಪಕ ಬಳಕೆಯ ಕುರಿತೂ ಸಹ ಚರ್ಚಿಸಲಾಯಿತು.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಗೃಹ ಕಾರ್ಮಿಕರಿಗೆ ಶೀಘ್ರದಲ್ಲೇ ಶಾಸನಬದ್ಧ ರಕ್ಷಣೆ, ಕನಿಷ್ಠ ವೇತನ; ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸರ್ಕಾರದ ಸಿದ್ಧತೆ

Spread the love ಬೆಂಗಳೂರು: ರಾಜ್ಯಾದ್ಯಂತ ಸುಮಾರು 8 ಲಕ್ಷ ಗೃಹ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದ ಮಹತ್ವದ ಕಾನೂನನ್ನು ಜಾರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ