Breaking News

ಯಾಸೀನ್ ಮಲಿಕ್‌ಗೆ ಮರಣ ದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಮನವಿ

Spread the love

ನವದೆಹಲಿ: ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದಲ್ಲಿ ದೋಷಿಯಾಗಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಹೋರಾಟಗಾರ ಯಾಸೀನ್ ಮಲಿಕ್‌ಗೆ ಮರಣ ದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಮನವಿ ಮಾಡಿದೆ.

ಬುರ್ಹಾನ್‌ವಾನಿ ಎನ್‌ಕೌಂಟರ್ ಆದ 30 ನಿಮಿಷಗಳಲ್ಲಿ ನನ್ನನ್ನು ಬಂಧಿಸಲಾಯಿತು. ಅಟಲ್ ಬಿಹಾರಿ ವಾಜಪೇಯಿ ಅವರು ನನಗೆ ಪಾಸ್‌ಪೋರ್ಟ್ ಮಂಜೂರು ಮಾಡಿದ್ದರು ಹಾಗೂ ನಾನು ಅಪರಾಧಿ ಅಲ್ಲ ಎಂಬ ಕಾರಣಕ್ಕೆ ನನಗೆ ಹೇಳಿಕೆ ನೀಡಲು ಭಾರತ ಅವಕಾಶ ಮಾಡಿಕೊಟ್ಟಿತು ಎಂದು ಯಾಸಿನ್ ಮಲಿಕ್ ನ್ಯಾಯಾಲಯದಲ್ಲಿ ಹೇಳಿದ್ದಾನೆ.

1994ರಲ್ಲಿ ನಾನು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಗಾಂಧಿಯವರ ತತ್ವಗಳನ್ನು ಅನುಸರಿಸುತ್ತಿದ್ದೆ. ನಾನು ಕಾಶ್ಮೀರದಲ್ಲಿ ಅಹಿಂಸಾತ್ಮಕ ರಾಜಕೀಯ ಮಾಡುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ.

ನಾನು ಈ ಹಿಂದೆ 7 ಪ್ರಧಾನಿಗಳೊಂದಿಗೆ ಕೆಲಸ ಮಾಡಿದ್ದೇನೆ. ಕಳೆದ 24 ವರ್ಷಗಳಲ್ಲಿ ಯಾವುದೇ ಭಯೋತ್ಪಾದನಾ ಚಟುವಟಿಕೆ ಅಥವಾ ಹಿಂಸಾಚಾರಗಳಲ್ಲಿ ಭಾಗಿಯಾಗಿದ್ದರೆ ಅದನ್ನು ಸಾಬೀತುಪಡಿಸಲಿ ಎಂದು ಭಾರತೀಯ ಗುಪ್ತಚರ ಇಲಾಖೆಗೆ ಸವಾಲು ಹಾಕಿದ್ದಾನೆ. 


Spread the love

About Laxminews 24x7

Check Also

ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ರವಿಕುಮಾರ್‌ ಕೊನೆಗೂ ರಾಜೀನಾಮೆ

Spread the loveಬೆಂಗಳೂರು, (ಸೆಪ್ಟೆಂಬರ್ 05): ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (Bhovi Development Corporation) ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ