Breaking News
Home / Uncategorized / ನಕಲಿ ದಾಖಲೆ ಸೃಷ್ಟಿ; ಹದಿನೇಳು ಮಂದಿ ವಿರುದ್ಧ ಪ್ರಕರಣ

ನಕಲಿ ದಾಖಲೆ ಸೃಷ್ಟಿ; ಹದಿನೇಳು ಮಂದಿ ವಿರುದ್ಧ ಪ್ರಕರಣ

Spread the love

ಹೊಸಪೇಟೆ (ವಿಜಯನಗರ): ನಕಲಿ ದಾಖಲೆ ಸೃಷ್ಟಿಸಿ, ಜಮೀನು ಕಬಳಿಸಿ ಸರ್ಕಾರಕ್ಕೆ ವಂಚಿಸಿರುವ ದೂರಿನ ಮೇರೆಗೆ ಇಲ್ಲಿನ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ಒಂದೇ ದಿನ ನಾಲ್ಕು ಪ್ರತ್ಯೇಕ ಘಟನೆಗಳಡಿ 17 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

 

ಒಂದು ಪ್ರಕರಣದಲ್ಲಿ ಹೊಸಪೇಟೆ ನಗರಸಭೆ ಸಿಬ್ಬಂದಿ ಹಾಗೂ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿ/ಸಿಬ್ಬಂದಿ ಎಂದಷ್ಟೇ ದೂರು ಕೊಡಲಾಗಿದೆ. ಯಾರ ಹೆಸರನ್ನೂ ಉಲ್ಲೇಖಿಸಿಲ್ಲ. ನಾಲ್ಕೂ ಪ್ರಕರಣಗಳಲ್ಲಿ ಅಧಿಕಾರಿಗಳೇ ಖುದ್ದು ಠಾಣೆಗೆ ದೂರು ಕೊಟ್ಟಿದ್ದಾರೆ.

ಸಂಕ್ಲಾಪುರ ಗ್ರಾಮದ ಸರ್ವೇ ನಂಬರ್‌ 148 ಸರ್ಕಾರಿ ಜಮೀನನ್ನು 1999ರಿಂದ 2022ರ ಅವಧಿಯಲ್ಲಿ ಹೊಸಪೇಟೆ ನಗರಸಭೆ, ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿ/ಸಿಬ್ಬಂದಿ, ನಗರಸಭೆಯ ದಾಖಲೆಗಳಲ್ಲಿ 1ರಿಂದ 7 ಜನರ ಹೆಸರಿಗೆ ಅಕ್ರಮ ಖಾತೆಗಳನ್ನು ಸೃಷ್ಟಿಸಿರುವುದು ಕಂಡು ಬಂದಿದೆ. ಸದರಿ ಅಧಿಕಾರಿ/ಸಿಬ್ಬಂದಿ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ನಗರಸಭೆ ಪೌರಾಯುಕ್ತ ರಮೇಶ ಬಿ.ಎಸ್‌. ದೂರು ಕೊಟ್ಟಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಪೌರಾಯುಕ್ತ ಬಿ.ಎಸ್‌. ರಮೇಶ್‌ ಅವರೇ ನಗರಸಭೆಯ ಕೇಸ್‌ ವರ್ಕರ್‌ಗಳಾದ ಎಸ್‌. ಸುರೇಶ್‌, ಮಂಜುನಾಥ ದಳ ವಾಯಿ, ಬಿಲ್ ಕಲೆಕ್ಟರ್‌ ಜಿ. ನೀಲಕಂಠ ಸ್ವಾಮಿ, ಕಂದಾಯ ಅಧಿಕಾರಿ ಎಸ್‌. ಅಜಿತ್‌ ಸಿಂಗ್‌, ಕಂದಾಯ ಇನ್‌ಸ್ಪೆಕ್ಟರ್‌ ನಾಗರಾಜ, ಪ್ರಭಾರ ಕರವಸೂಲಿಗಾರ ರಮೇಶ್‌, ನಿವೃತ್ತ ಅಧಿಕಾರಿ ಬಿ.ಸಿ. ಪೂಜಾರ್‌ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ. ಏಳು ಜನರು ಸೇರಿಕೊಂಡು ಮಲ್ಲಿಕಾರ್ಜುನ, ಡಿ. ವೇಣುಗೋಪಾಲ್‌, ಜೇಟ್‌ ರಾಮ್‌ ಎಂಬುವರ ಹೆಸರಿಗೆ ಹೊಸಪೇಟೆಯ ಸರ್ವೇ ನಂಬರ್‌ 302/ಬಿ2 0.82 ಸೇಂಟ್ಸ್‌ ಸರ್ಕಾರಿ ಜಮೀನು ಮಾಡಿಕೊಡಲು ನಗರಸಭೆಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೊಟ್ಟು ಸರ್ಕಾರಕ್ಕೆ ಮೋಸ ಮಾಡಿದ್ದು ಕಾನೂನು ಕ್ರಮ ಜರುಗಿಸಬೇಕೆಂದು ಕೋರಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ಲಕ್ಷ್ಮೀ ಹೆಬ್ಬಾಳ್ಕರ್

Spread the love  ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ