Breaking News

ಗ್ರಾಮ ಒನ್ ಕೇಂದ್ರದಲ್ಲಿ ಬಸ್ ಪಾಸ್ ಪಡೆಯಲು ಅವಕಾಶ

Spread the love

ಸರ್ಕಾರದ ಆದೇಶದಂತೆ ಗ್ರಾಮ ಒನ್ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳ ಒಟ್ಟು 768 ಸೇವೆಗಳನ್ನು ನೀಡಲಾಗುತ್ತಿದೆ.

 

ಅದರಂತೆ ವಿದ್ಯಾರ್ಥಿಗಳಿಗೆ ಕೆಎಸ್‍ಆರ್‍ಟಿಸಿ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಗ್ರಾಮ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬಸ್‍ಪಾಸ್ ಅಪೇಕ್ಷಿಸುವ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆಯಲು ಕೋರಿದೆ.

ವಿದ್ಯಾರ್ಥಿಗೆ ಬಸ್ ಪಾಸ್‍ಗೆ ಅಗತ್ಯ ದಾಖಲೆ, ಶೈಕ್ಷಣಿಕ ಸಂಸ್ಥೆ ಕೆಎಸ್‍ಆರ್‍ಸಿ ಬಸ್ ಪಾಸ್‍ನಿಂದ ಘೋಷಣೆ ಪ್ರಮಾಣಪತ್ರ, ಆಧಾರ್ ಕಾರ್ಡ್, ಶುಲ್ಕ ಪಾವತಿಸಿದ ರಸೀದಿ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಎಸ್‍ಸಿಎಸ್‍ಟಿ ಪ್ರಮಾಣ ಪತ್ರ(ಅನ್ವಯಿಸಿದರೆ) ಈ ದಾಖಲೆಗಳೊಂದಿಗೆ ಗ್ರಾಮ ಒನ್ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.


Spread the love

About Laxminews 24x7

Check Also

ಧಾರವಾಡದಕ್ಲಿ ಸಾರ್ವಜನಿಕ ಗಣೇಶನ ಮೂರ್ತಿಗಳ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ…. ವಿಘ್ನ ನಿವಾರಕ ಮೂರ್ತಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದ ಜೋಶಿ.

Spread the love ಧಾರವಾಡದಕ್ಲಿ ಸಾರ್ವಜನಿಕ ಗಣೇಶನ ಮೂರ್ತಿಗಳ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ…. ವಿಘ್ನ ನಿವಾರಕ ಮೂರ್ತಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ