Breaking News

ಉಕ್ರೇನ್-ರಷ್ಯಾ ಯದ್ಧದಿಂದ ಹತ್ತಾರು ಸಮಸ್ಯೆಗಳು ಹೆಚ್ಚಾಗಿವೆ.

Spread the love

ಬೆಂಗಳೂರು: ಸ್ವಿಟ್ಜರ್​ಲೆಂಡ್​ನ ದಾವೋಸ್​ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ (Davos Summit 2022) ಪಾಲ್ಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಸಭೆಯ ವಿವರಗಳನ್ನು ನಗರದಲ್ಲಿ ನೀಡಿದರು.

ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ದೇವೇಗೌಡ, ಎಸ್.ಎಂ.ಕೃಷ್ಣ ಮತ್ತು ಯಡಿಯೂರಪ್ಪ ಸಹ ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಆರ್ಥಿಕವಾಗಿ ಅಭಿವೃದ್ಧಿ ಹೊಂದಿರುವ ದೇಶಗಳ ಉದ್ಯೋಗಪತಿಗಳು ಒಂದೆಡೆ ಸೇರುವ ಶೃಂಗಸಭೆಗೆ ಈ ಬಾರಿ ಕೊವೊಡ್ ಹಿನ್ನೆಲೆಯಲ್ಲಿ ಸಾಕಷ್ಟು ಮಹತ್ವವಿತ್ತು ಎಂದು ಹೇಳಿದರು.

ಕೊವಿಡ್​ನಿಂದಾಗಿ ಜಾಗತಿಕ ಆರ್ಥಿಕತೆಯು ಹಿಂಜರಿಕೆಯ ಸುಳಿಗೆ ಸಿಲುಕುವ ಅಪಾಯ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ಶೃಂಗಸಭೆ ಎಲ್ಲರ ಗಮನ ಸೆಳೆದಿತ್ತು. ಭಾರತದ ಆರ್ಥಿಕತೆ ಬಗ್ಗೆ ವಿಶ್ವದ ವಿವಿಧ ದೇಶಗಳ ಪ್ರತಿಕ್ರಿಯೆ ಹೇಗಿರಬಹುದು ಎಂಬ ಕುತೂಹಲ ವ್ಯಕ್ತವಾಗಿತ್ತು. ಹಲವು ದೇಶಗಳ ಪ್ರತಿನಿಧಿಗಳು ಭಾರತಕ್ಕೆ ನೀಡಿದ್ದ ಪ್ರಾಮುಖ್ಯತೆ ಗಮನಿಸಿದಾಗ ಭಾರತವು ನಿಜಕ್ಕೂ ಬೆಳೆಯುತ್ತಿರುವ ಆರ್ಥಿಕತೆ ಎನ್ನುವುದು ಮನವರಿಕೆಯಾಯಿತು. ಚೀನಾದಲ್ಲಿ ಇಂದಿಗೂ ಲಾಕ್​ಡೌನ್ ಮುಂದುವರಿಯುತ್ತಿದೆ. ಉಕ್ರೇನ್-ರಷ್ಯಾ ಯದ್ಧದಿಂದ ಹತ್ತಾರು ಸಮಸ್ಯೆಗಳು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಭಾರತದತ್ತ ಕುತೂಹಲದಿಂದ ನೋಡುತ್ತಿದ್ದಾರೆ ಎಂದು ತಿಳಿಸಿದರು.

ನವೀಕರಿಸಬಹುದಾದ ಇಂಧನ ಮತ್ತು ಹವಾಮಾನ ವೈಪರಿತ್ಯಗಳು ಈ ಬಾರಿಯ ಚರ್ಚೆಯ ಮುಖ್ಯ ಅಂಶಗಳಾಗಿದ್ದವು. ಕರ್ನಾಟಕವು ಈ ಬಾರಿಯೂ ದೊಡ್ಡಮಟ್ಟದ ಬಂಡಾವಳವನ್ನು ಆಕರ್ಷಿಸಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ