Breaking News

ರಾಜ್ಯದಲ್ಲಿ ೬೫ ಸಾವಿರ ಕೋಟಿ ಬಂಡವಾಳ ಹೂಡಲು ಹಲವು ಕಂಪನಿಗಳು ತೋರಿವೆ ಬದ್ಧತೆ: ಸಿಎಂ ಬಸವರಾಜ ಬೊಮ್ಮಾಯಿ

Spread the love

ಬೆಂಗಳೂರು : ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಕಂಪನಿಗಳು ಮುಂದೆ ಬಂದಿವೆ. ಅಂದಾಜು ೬೫ ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಕಂಪನಿಗಳು ಬದ್ಧತೆ ತೋರಿವೆ. ಇದು ಕೈಗಾರಿಕೆ ಸ್ಥಾಪನೆಗೆ ರಾಜ್ಯ ನೀಡುತ್ತಿರುವ ಪ್ರೋತ್ಸಾಹ ಹಾಗೂ ನೀತಿ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.‌

ಬಂಡವಾಳ ಹೂಡಿಕೆಗೆ ರಾಜ್ಯದಲ್ಲಿನ ಪೂರಕ ಪರಿಸರ, ನೀತಿ ನಿಯಮಗಳು, ತಂತ್ರಜ್ಞಾನ ಆಧಾರ, ಕೌಶಲ್ಯಯುತ ಮಾನವಸಂಪನ್ಮೂಲ, ಆರ್ ಎಂಡ್ ಡಿ ಕೇಂದ್ರಗಳು, ಉದ್ದಿಮೆಗಳಿಗೆ ನೀಡಲಾಗುವ ಪ್ರೋತ್ಸಾಹಕಗಳು, ಭೂಮಿಯ ಲಭ್ಯತೆಗಳಿಂದಾಗಿ ಬಂಡವಾಳ ಹೂಡಿಕೆ ಸಂಸ್ಥೆಗಳಿಗೆ ಕರ್ನಾಟಕದ ರಾಜ್ಯದ ಮೇಲೆ ವಿಶ್ವಾಸವನ್ನು ಮೂಡಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ -2022ಕ್ಕೆ ಸಂಬಂಧಿಸಿದಂತೆ ಪತ್ರಿಕಾ ಗೋಷ್ಟಿ ನಡೆಸಿ ಮಾತನಾಡಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ