Breaking News

ಪತಿಯಿಂದಲೇ ಪತ್ನಿ ಹತ್ಯೆ- ಪೊಲೀಸರಿಗೆ ಶರಣಾದ ಆರೋಪಿ

Spread the love

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಲದಕುಪ್ಪೆ ಗ್ರಾಮದಲ್ಲಿ ಪತಿಯೇ ಪತ್ನಿಯನ್ನು ಹತ್ಯೆಗೈದ ಘಟನೆ ನಡೆದಿದೆ.

ಮಹದೇವಪ್ಪ (55) ಬಂಧಿತ ಆರೋಪಿ ಹಾಗೂ ಮಹದೇವಮ್ಮ (45) ಮೃತ ಮಹಿಳೆ. ದಂಪತಿ ಕಿಲಗೆರೆ ಹಾಗೂ ಮಾದಲವಾಡಿ ಗ್ರಾಮದ ನಡುವೆ ಇರುವ ಬೇಲದಕುಪ್ಪೆಯ ಜಮೀನೊಂದರಲ್ಲಿ ವಾಸವಾಗಿದ್ದರು. ಇವರ ನಡುವೆ ಇಂದು ಮುಂಜಾನೆ ಏಕಾಏಕಿ ಜಗಳ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿ ಸ್ನಾನದ ಮನೆಯಲ್ಲಿದ್ದ ಪತ್ನಿ ಮಹದೇವಮ್ಮರನ್ನು ಪತಿ ಮಹದೇವಪ್ಪ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ನಂತರ ಪತಿ ಮಹದೇವಪ್ಪ ಪೊಲೀಸ್ ಠಾಣೆಗೆ ತೆರಳಿ ಶರಣಾಗಿರುವ ಘಟನೆ ನಡೆದಿದೆ. ಘಟನೆ ಸಂಬಂಧಿಸಿ ತೆರಕಣಾಂಬಿ ಪೊಲೀಸ್ ಠಾಣೆಗೆ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ