ಮುಂಬೈ: ಮಹಾರಾಷ್ಟ್ರದಲ್ಲಿ ಮೊದಲ ಬಾರಿಗೆ ಕೋವಿಡ್ ರೂಪಾಂತರಿಯಾಗಿರುವ ಓಮಿಕ್ರಾನ್ ಬಿಎ.4 ಉಪತಳಿ 4 ರೋಗಿಗಳಲ್ಲಿ ಪತ್ತೆಯಾಗಿದೆ. ಇನ್ನೊಂದು ಓಮಿಕ್ರಾನ್‌ನ ಹೊಸ ಉಪತಳಿ ಬಿಎ.5 3 ರೋಗಿಗಳಲ್ಲಿ ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.
ಓಮಿಕ್ರಾನ್‌ನ ಈ ಹೊಸ ಉಪತಳಿಗಳು ಹೆಚ್ಚು ಅಪಾಯಕಾರಿ ಅಲ್ಲದಿರುವುದರಿಂದ ಜನರು ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.ಓಮಿಕ್ರಾನ್‌ನ ಈ ಹೊಸ ಉಪತಳಿಗಳು ಮೊದಲ ಬಾರಿಗೆ ಏಪ್ರಿಲ್‌ನಲ್ಲಿ ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ಕೆಲವು ಭಾಗಗಳಲ್ಲಿ ಕಂಡುಬಂದಿವೆ. ಕಳೆದ ವಾರ ತಮಿಳುನಾಡು ಹಾಗೂ ತೆಲಂಗಾಣದಲ್ಲಿ ಬಿಎ.4 ರೂಪಂತರಿ ಮೊದಲ ಪ್ರಕರಣ ಪತ್ತೆಯಾಗಿತ್ತು