Breaking News

ಕಾಲೇಜಿಗೆ ಟೋಪಿ ಹಾಕಿ ಬಂದ ವಿದ್ಯಾರ್ಥಿ ಮೇಲೆ ಹಲ್ಲೆ: ಪ್ರಿನ್ಸಿಪಾಲ್ ಸೇರಿ 7 ಮಂದಿ ಮೇಲೆ FIR

Spread the love

ಬಾಗಲಕೋಟೆ: ಕಾಲೇಜಿಗೆ ಟೋಪಿ ಹಾಕಿಕೊಂಡು ಬಂದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ಕಾಲೇಜು ಪ್ರಿನ್ಸಿಪಾಲ್, ಪಿಎಸ್‍ಎ, ಕಾನ್ಸ್‍ಟೇಬಲ್ ಸೇರಿ ಏಳು ಜನರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

ಫೆಬ್ರವರಿ 18 ರಂದು ತೇರದಾಳ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ನವೀದ್ ಥರಥರಿ ಮುಸ್ಲಿಂ ಟೋಪಿ ಹಾಕಿಕೊಂಡು ಕಾಲೇಜಿಗೆ ಬಂದಿದ್ದನು. ಈ ಹಿನ್ನೆಲೆ ಅವನ ಮೇಲೆ ಹಲ್ಲೆ ಮಾಡಲಾಗಿತ್ತು. ಇದನ್ನು ಖಂಡಿಸಿ ನವೀದ್ ಥರಥರಿ ನ್ಯಾಯಾಲಯದ ಮೊರೆ ಹೋಗಿದ್ದ. ಪರಿಣಾಮ ಬನಹಟ್ಟಿಯ ಜೆಎಂಎಫ್‍ಸಿ ನ್ಯಾಯಾಲಯದ ಆದೇಶದನ್ವಯ ತೇರದಾಳ ಪೊಲೀಸ್ ಠಾಣೆಯಲ್ಲಿ ಏಳು ಜನರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಫೆಬ್ರವರಿ ತಿಂಗಳಲ್ಲಿ ಹಿಜಬ್ ವಿವಾದ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿತ್ತು. ಇದೇ ಸಮಯಕ್ಕೆ ನವೀದ್ ಥರಥರಿ ಮುಸ್ಲಿಂ ಟೋಪಿ ಹಾಕಿಕೊಂಡು ಕಾಲೇಜಿಗೆ ಬಂದಿದ್ದ. ಈ ವೇಳೆ ನವೀದ್ ಮೇಲೆ ಪ್ರಿನ್ಸಿಪಾಲ್ ಸೇರಿ 7 ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿತ್ತು. ಹಲ್ಲೆ ನಂತರ ನವೀದ್ ಜಮಖಂಡಿ ಆಸ್ಪತ್ರೆಗೆ ದಾಖಲಾಗಿದ್ದ. ಈ ಹಿನ್ನೆಲೆ ನವೀದ್ ಘಟನೆಗೆ ಸಂಬಂಧಿಸಿದಂತೆ ಕೋರ್ಟ್ ಮೊರೆ ಹೋಗಿದ್ದ


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ