ಬಳ್ಳಾರಿ: ಕೇವಲ ಮತ ಬ್ಯಾಂಕ್‍ಗೋಸ್ಕರ ಸಿದ್ದರಾಮಯ್ಯ ಭಯೋತ್ಪಾದಕರ ಕಾಲು ನೆಕ್ಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಜಿ ಸಿಎಂ ಮತ್ತು ವಿಪಕ್ಷ ನಾಯಕನ ವಿರುದ್ಧ ಆಕ್ರೋಶ ಹೊರಹಾಕಿದರು.
ಬಿಜೆಪಿ ರಾಜ್ಯ ಎಸ್‍ಟಿ ಮೋರ್ಚಾ ಕಾರ್ಯಕಾರಿಣಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇವಲ ಮತ ಬ್ಯಾಂಕ್‍ಗೋಸ್ಕರ ಸಿದ್ದರಾಮಯ್ಯ ಅವರು ಭಯೋತ್ಪಾದಕರ ಕಾಲು ನೆಕ್ಕುತ್ತಿದ್ದಾರೆ. ಭಿಕ್ಷಾಟನೆ ಮಾಡುವ ಸ್ಥಿತಿಗೆ ಹೋಗಿದ್ದಾರೆ. ಸಿದ್ದರಾಮಯ್ಯ ಅವರ ಚಿಂತನೆ ರಾವಣನದು. ಅದಕ್ಕೆ ಸಿದ್ದರಾಮಣ್ಣ ಅವರನ್ನು ಓಡಿಸಬೇಕು ಎಂದು ಜನ ನಿಶ್ಚಯ ಮಾಡಿದ್ದಾರೆ ಎಂದು ಕಿಡಿಕಾರಿದರು
Laxmi News 24×7