Breaking News

ನಪೂಂಸಕರು ಯಾರು ಅಂತ ಇಡೀ ರಾಷ್ಟ್ರಕ್ಕೆ ಗೊತ್ತಿದೆ – ಸಿದ್ದುಗೆ ಶೆಟ್ಟರ್ ಟಾಂಗ್

Spread the love

ಗದಗ: ನಪೂಂಸಕರು ಯಾರು ಅಂತ ಇಡೀ ರಾಷ್ಟ್ರಕ್ಕೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

ಆರ್‌ಎಸ್‌ಎಸ್ ನಪೂಂಸಕರ ಸಂಘ ಹಾಗೂ ಆರ್‌ಎಸ್‌ಎಸ್ ಮೂಲಕ್ಕೆ ಕೈ ಹಾಕಿದ್ದ ಸಿದ್ದರಾಮಯ್ಯಗೆ ಜಗದೀಶ್ ಶೆಟ್ಟರ್ ಮಾತಿನ ತಿರುಗೇಟು ನೀಡಿದ್ದಾರೆ. ಗದಗದಲ್ಲಿ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಪರ ಮತಯಾಚಣೆಗೆ ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಪೂಂಸಕರು ಯಾರು? ಏನು ಅನ್ನುವಂತಹದ್ದು, ಇಡೀ ರಾಷ್ಟ್ರಕ್ಕೆ ಗೊತ್ತಿದೆ.

ಕಾಂಗ್ರೆಸ್ ಇಡೀ ರಾಷ್ಟ್ರದಲ್ಲಿ ಯಾವ ಪರಿಸ್ಥಿತಿಗೆ ಬಂದಿದೆ ಅಂದರೆ, ಅದರಲ್ಲಿ ಅವರು ನಪೂಂಸಕರು ಎಂದು ತೋರಿಸುತ್ತದೆ. ಅವರು ನಂಪೂಂಸಕರು ಅಂತ ತಮಗೆ ತಾವೇ ಸಾಬೀತು ಮಾಡಿಕೊಂಡಿದ್ದಾರೆ. ಪಂಜಾಬ್‍ನಲ್ಲಿ ಏನಾಯಿತು. ಇನ್ನು ಮುಂಬರುವ ಹಿಮಾಚಲ, ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಡ್ರೆಸ್ ಸಹ ಇರುವುದಿಲ್ಲ. ಮುಂಬರುವ ಚುನಾವಣೆ ಕಾಂಗ್ರೆಸ್ ನಪೂಂಸಕತೆಗೆ ಒಂದು ಸಾಕ್ಷಿಯಾಗಲಿದೆ ಎಂದು ವ್ಯಂಗ್ಯವಾಡಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ