Breaking News

PSI ಪರೀಕ್ಷೆಯಲ್ಲಿ ಅಕ್ರಮ: ಒಂದೂವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಶಾಂತಿಬಾಯಿ ಕೊನೆಗೂ ಅರೆಸ್ಟ್​! ಗಂಡನೂ ಸಿಕ್ಕಿಬಿದ್ದ

Spread the love

: 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿನ ಅಕ್ರಮ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಶಾಂತಿಬಾಯಿ ದಂಪತಿ ಕೊನೆಗೂ ಸಿಕ್ಕಿಬಿದ್ದಿದ್ದಾರೆ.

2021ರ ಅಕ್ಟೋಬರ್ 3ರಂದು ನಡೆದ 545 ಎಸ್‌ಐ ನೇಮಕಾತಿಗೆ ರಾಜ್ಯದಲ್ಲಿ 92 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು.

ಲಿಖಿತ ಪರೀಕ್ಷೆ ಬಳಿಕ ಅಕ್ರಮ ನಡೆದಿರುವ ಕುರಿತು ದೂರುಗಳು ದಟ್ಟವಾಗಿ ಕೇಳಿಬಂದ ಹಿನ್ನೆಲೆ ಏಪ್ರಿಲ್ 7ರಂದು ಅಕ್ರಮ ಕುರಿತು ಸಿಐಡಿ ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶಿಸಿದರು. ಎಫ್​ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಳ್ಳುತ್ತಿದ್ದಂತೆ ಅಕ್ರಮ ಬಗೆದಷ್ಟು ಆಳ ಎಂಬಂತೆ ಬಯಲಾಗುತ್ತಲೇ ಇದೆ. ಅಕ್ರಮದ ಉರುಳು ಪ್ರಮುಖ ಘಟಾನುಘಟಿಗಳನ್ನೇ ಸುತ್ತಿಕೊಂಡಿದೆ. ಈಗಾಗಲೇ ಕಿಂಗ್​ಪಿನ್​, ಏಜೆಂಟ್​, ಮಧ್ಯವರ್ತಿಗಳು, ಅಭ್ಯರ್ಥಿಗಳು ಸೇರಿದಂತೆ ಹಲವರನ್ನ ಸಿಐಡಿ ಬಂಧಿಸಿದೆ. ಇದೇ ಪ್ರಕರಣದಲ್ಲಿ ಆರೋಪಿಗಳ ಪಟ್ಟಿಯಲ್ಲಿ ಹೆಸರಿದ್ದ ಶಾಂತಿಬಾಯಿ ಮತ್ತು ಈಕೆಯ ಗಂಡ ಬಸ್ಯಾ ನಾಯಕ್ ತಲೆ ಮರೆಸಿಕೊಂಡಿದ್ದರು. ಒಂದೂವರೆ ತಿಂಗಳಿನಿಂದ ತಲೆ ಮರೆಸಿಕೊಂಡ ಮಹಿಳಾ ಅಭ್ಯರ್ಥಿ ಶಾಂತಿಬಾಯಿ ಕೊನಗೂ ಸಿಕ್ಕಿಬಿದ್ದಿದ್ದಾಳೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ