Breaking News

ಮೇ 31ರಂದು ವಿಶ್ವ ತಂಬಾಕು ರಹಿತ ದಿನ

Spread the love

ಹುಬ್ಬಳ್ಳಿ: ನಗರದ ಸಿದ್ದಪ್ಪ ಕಂಬಳಿ ರಸ್ತೆಯಲ್ಲಿರುವ ಲ್ಯಾಮಿಂಗ್ಟನ್ ಬಾಲಕ ಮತ್ತು ಬಾಲಕಿಯರ ಪ್ರೌಢಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ಆರೋಗ್ಯ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಲ್ಯಾಮಿಂಗ್ಟನ್ ಪ್ರೌಢಶಾಲೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ, ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಮೇ 31ರಂದು ಮಧ್ಯಾಹ್ನ 2 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

 

ಕಾರ್ಯಕ್ರಮವನ್ನು ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಹಾಗೂ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಆರ್.ಎಸ್. ಚಿನ್ನಣ್ಣವರ ಉದ್ಘಾಟಿಸುವರು. ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ಶಿವಳ್ಳಿಮಠ ಅಧ್ಯಕ್ಷತೆ ವಹಿಸುವರು.

ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಧಾನ ದಿವಾಣಿ ನ್ಯಾಯಾಧೀಶ ರಾಜಶೇಖರ ತಿಳಗಂಜಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಆರ್.ಎಸ್. ಹಿತ್ತಲಮನಿ, ಕ್ಷೇತ್ರ ಆರೋಗ್ಯಾಧಿಕಾರಿ ಮೌನೇಶ್ವರ ಬಡಿಗೇರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ. ಓಂಕಾರ, ಲ್ಯಾಮಿಂಗ್ಟನ್ ಬಾಲಕರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜ್ಯೋತಿ ಪಾಟೀಲ, ಲ್ಯಾಮಿಂಗ್ಟನ್ ಬಾಲಕಿಯರ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಅನ್ನಪೂರ್ಣ ಕಟಗೇರಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ