Breaking News

ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ಸಿದ್ದಾರೂಢರ ಹೆಸರು ನಾಮಕರಣ

Spread the love

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ರೈಲ್ವೆ ನಿಲ್ದಾಣಕ್ಕೆ ಉತ್ತರ ಕರ್ನಾಟಕ ಭಾಗದ ಆರಾಧ್ಯ ದೈವ ಹೂಬಳ್ಳಿಯ ಸಿದ್ದಾರೂಢ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ಗೃಹ ಇಲಾಖೆಯಿಂದ ರಾಜ್ಯ ಕಂದಾಯ ಇಲಾಖೆಗೆ ಆದೇಶದ ಪ್ರತಿ ರವಾನೆ ಮಾಡಲಾಗಿದೆ.

ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ಪಿಯೂಷ್ ಗೋಯಲ್ ಅವರಿಗೆ ಟ್ವಿಟರ್ ಮೂಲಕ ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿಯವರು ಅಭಿನಂದನೆ ಸಲ್ಲಿಸಿದ್ದಾರೆ.

ಹುಬ್ಬಳ್ಳಿ ಜನರ ಬಹುನಿರೀಕ್ಷಿತ ಬೇಡಿಕೆಯಲ್ಲಿ ಒಂದಾಗಿರುವ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಸದ್ಗುರು ಸಿದ್ದಾರೂಢರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿಯವರು ಪ್ರಸ್ತಾವನೆ ಸಲ್ಲಿಸಿದ ಬೆನ್ನಲ್ಲೇ ಹುಬ್ಬಳ್ಳಿ ರೈಲು ನಿಲ್ದಾಣದ ಹೆಸರು ಬದಲಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಉತ್ತರ ಕರ್ನಾಟಕದ ಪ್ರಸಿದ್ಧ ಶ್ರೀ ಸಿದಾರೂಢ ರೈಲ್ವೇ ನಿಲ್ದಾಣವೆಂದು ನಾಮಕರಣ ಮಾಡುವಂತೆ ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ರೈಲು ನಿಲ್ದಾಣದ ಹೆಸರು ಬದಲಿಸಿ ಆದೇಶ ಹೊರಡಿಸಲಾಗಿದ್ದು, ಹುಬ್ಬಳ್ಳಿ ಜನತೆಯ ಆಸೆ ಫಲಿಸಿದೆ. ಅಲ್ಲದೇ ಹುಬ್ಬಳ್ಳಿ ಜನರ ಬೇಡಿಕೆಗೆ ಸ್ಪಂದಿಸಿದ ಸುರೇಶ್ ಅಂಗಡಿ ಅವರಿಗೆ ಹಾಗೂ ಕೇಂದ್ರ ಸಚಿವರಿಗೆ ಹುಬ್ಬಳ್ಳಿ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.

 

 


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ