Breaking News

ರಾಷ್ಟ್ರಕವಿ ಕುವೆಂಪು ರವರನ್ನು ನಿಂದಿಸಿದ ರೋಹಿತ್ ಚಕ್ರತೀರ್ಥರನ್ನು ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮೀತಿಯಿಂದ ವಜಾಗೊಳಿಸುವಂತೆ ರಾಜ್ಯಸರಕಾರಕ್ಕೆ ಒತ್ತಾಯ

Spread the love

ರಾಷ್ಟ್ರಕವಿ ಕುವೆಂಪು ರವರನ್ನು ನಿಂದಿಸಿದ ರೋಹಿತ್ ಚಕ್ರತೀರ್ಥರನ್ನು ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮೀತಿಯಿಂದ ವಜಾಗೊಳಿಸುವಂತೆ ರಾಜ್ಯಸರಕಾರಕ್ಕೆ ಒತ್ತಾಯಿಸುವ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಕವಿ ಕುವೆಂಪುರವರನ್ನು ನಿಂದಿಸಿ ಅವಮಾನ ಮಾಡಿದ ಕುರಿತಂತೆ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮೀತಿಯನ್ನು ವಜಾಗೊಳಿಸುವಂತೆ ಬೆಳಗಾವಿ ನಗರದ ರಾಣಿ ಚೆನ್ನಮ್ಮಾ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು. ಈ ವೇಳೆ ರೋಹಿತ್ ಚಕ್ರತೀರ್ಥರ ಪ್ರತಿಕೃತಿಯ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶವನ್ನು ಹೊರಹಾಕಿದರು.

ಈ ವೇಳೆ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು. ಇದೇ ವೇಳೆ ಸರಕಾರದ ವಿರುದ್ಧವೂ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಬಹುತ್ವವುಳ್ಳ ದೇಶದಲ್ಲಿ ಇಂದಿನ ಸರಕಾರ ಯಾವುದೋ ಒಂದು ಸಮುದಾಯದ ಗುಲಾಮರಂತೆ ವರ್ತಿಸುತ್ತಿದೆ. ಹಾಗಾಗಿ ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿಗಳಿಗೆ ಧಿಕ್ಕಾರವನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ