ಬೆಂಗಳೂರು: ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮಾರ್ಗಮಧ್ಯೆ ಅಪಘಾತಕ್ಕೀಡಾಗಿದೆ. ಬಸ್ನ ಮುಂಭಾಗ ತೆರಳುತ್ತಿದ್ದ ಟ್ರ್ಯಾಕ್ಟರ್ನ ಟ್ರೈಯರ್ ಸ್ಫೋಟಗೊಂಡ ಪರಿಣಾಮ ರಸ್ತೆಯಲ್ಲೇ ಟ್ರ್ಯಾಕ್ಟರ್ ಪಲ್ಟಿಯಾಗಿದೆ.
ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆಯುವದನ್ನ ತಪ್ಪಿಸಲು ಹೋಗಿ ಬಸ್ ರಸ್ತೆಬದಿಯ ಹಳ್ಳಕ್ಕೆ ನುಗ್ಗಿದೆ.
ಇಂತಹ ಘಟನೆ ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಚಿಕ್ಕಸಣ್ಣೆಬಳಿ ಮಂಗಳವಾರ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.
Laxmi News 24×7