ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10 ರಂದು ನಡೆಯಲಿರುವ ಚುನಾವಣೆಗೆ ನಾಲ್ಕನೇ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಮನ್ಸೂರ್ ಅಲಿ ಖಾನ್ ಕಣಕ್ಕಿಳಿದರೆ ಜೆಡಿಎಸ್‌ನಿಂದ ಕುಪೇಂದ್ರ ರೆಡ್ಡಿ ಕಣಕ್ಕಿಳಿದಿದ್ದಾರೆ.
ಕಾಂಗ್ರೆಸ್ ನ ಮನ್ಸೂರ್ ಖಾನ್ ಸ್ಪರ್ಧೆಯಿಂದ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಹಿನ್ನಡೆಯಾಗುವ ಸಾಧ್ಯತೆ ಇದ್ದು, ಈಗಾಗಲೇ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರು ನಮ್ಮ ಅಭ್ಯರ್ಥಿಗೆ ಕಾಂಗ್ರೆಸ್ ಬೆಂಬಲ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದರೆ, ಇದಕ್ಕೂ ಮುನ್ನ ಕುಪೇಂದ್ರ ರೆಡ್ಡಿ ಅವರು ಡಿಕೆ ಶಿವಕುಮಾರ್ ಹಾಗೂ ಬಿ.ಕೆ ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಇದೀಗ ಜೆಡಿಎಸ್ ಮುಖಂಡರಾದ ಶರವಣ ಹಾಗೂ ಬಿ.ಎಂ ಫಾರೂಕ್ ಅವರು ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಶಾಸಕರಾದ ರಾಜೇಂದ್ರ, ಶರಣಗೌಡ ಬಯ್ಯಾಪುರ, ಮಾಜಿ ಸಂಸದ ಉಗ್ರಪ್ಪ, ಮಾಜಿ ಶಾಸಕ ಶ್ರೀನಿವಾಸ್ ಹಾಜರಿದ್ದರು.