ಚಿಕ್ಕೋಡಿ: ತಾಯಿಯೊಬ್ಬರು ಎಂಟು ವರ್ಷಗಳ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದಲ್ಲಿ ನಡೆದಿದೆ.
ಸವೀತಾ ಮದಗೋಂಡ ಬೆಳಗಲಿ (24) ಪವಿತ್ರಾ ಮದಗೋಂಡ ಬೆಳಗಲಿ (8) ಮೃತ ದುರ್ದೈವಿಗಳು. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಶವಗಳನ್ನು ಸ್ಥಳೀಯರು ಹೊರತೆಗೆದಿದ್ದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.