Breaking News

ಜೂನ್ 8 ರಿಂದ ಬಿಜೆಪಿಯ ಶಾಸಕರ ಕಚೇರಿ, ಮನೆ ಮುಂದೆ ಧರಣಿ ಸತ್ಯಾಗ್ರಹ: ಪ್ರಮೋದ್ ಮುತಾಲಿಕ್

Spread the love

ಮಸೀದಿ, ದೇವಾಲಯ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಲೌಡ್​ಸ್ಪೀಕರ್ ಬಳಕೆ ವಿಚಾರದಲ್ಲಿ ಸರ್ಕಾರಕ್ಕೆ ನೀಡಿದ ಡೆಡ್ ಲೈನ್ ಕೊನೆಯಾಗಿದ್ದು, ಜೂನ್ 8 ರಿಂದ ಬಿಜೆಪಿಯ ಶಾಸಕರ ಕಚೇರಿ, ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಕ್ ನಿರ್ಬಂಧ ಕುರಿತು ರಾಜ್ಯ ಸರ್ಕಾರ ಅಧಿಕೃತವಾಗಿ ಸುತ್ತೋಲೆ ಪ್ರಕಟಿಸಿ. ಮೈಕ್ ಬಳಸಲು ಧಾರ್ಮಿಕ ಕೇಂದ್ರಗಳು ಅನುಮತಿ ಪಡೆಯಬೇಕು. ರಾತ್ರಿ 10 ಗಂಟೆ ಬಳಿಕ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಿಯಮ ಪಾಲನೆ ಮಾಡದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿ ಹದಿನೈದು ದಿನಗಳ ಗಡವು ನೀಡಿತ್ತು. ಆದರೆ ಈವರೆಗೆ ಯಾವುದೇ ನಿಯಮಗಳು ಜಾರಿಯಾಗಿಲ್ಲ. ಸರ್ಕಾರದ ಸುತ್ತೋಲೆ ಕಸದ ಬುಟ್ಟಿಗೆ ಸೇರಿವೆ ಹೀಗಾಗಿ ಶ್ರೀರಾಮ ಸೇನೆ ಸೇರಿದಂತೆ ಹತ್ತಕ್ಕಿಂತ ಹೆಚ್ಚು ಹಿಂದೂಪರ ಸಂಘಟನೆಗಳ ಸಹಯೋಗದಲ್ಲಿ ಮೈಕ್ ತೆರವಿನ ಹೋರಾಟ ಮುಂದುವರಿಸಲಾಗುತ್ತಿದೆ ಎಂದು ಮುತಾಲಿಕ್ ತಿಳಿಸಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ