Breaking News

ಬಿತ್ತನೆ ಮುಂದೂಡುವಂತೆ ರೈತರಿಗೆ ಕೃಷಿ ಇಲಾಖೆ ಸಲಹೆ

Spread the love

ಬೆಳಗಾವಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ವಿಜಯಪುರ ಜಿಲ್ಲೆಯಾದ್ಯಂತ ಕಳೆದ ವಾರ ಸುರಿದ ಅಕಾಲಿಕವಾಗಿರುವ ಮಳೆ ನೈಸರ್ಗಿಕ ಮಾನ್ಸೂನುಗಳಿಂದಾದುದಲ್ಲ ಬದಲಾಗಿ ಸೈಕ್ಲೋನ್‌ ಪರಿಣಾಮದಿಂದಾದ ಮಳೆಯಾಗಿರುತ್ತದೆ. ಆದ್ದರಿಂದ ರೈತರಿಗೆ ಸದ್ಯ ಬಿತ್ತುಣಿಕೆಗೆ ಭೂಮಿಯನ್ನು ಹದ ಮಾಡಿಕೊಳ್ಳಲು ಮತ್ತು ಮಾಗಿ ಉಳುಮೆ ಮಾಡಲು ಅವಕಾಶ ಇದೆ.

 

ಪ್ರಸ್ತುತ ಭೂಮಿಯ ತೇವಾಂಶ ಸಂಪೂರ್ಣ ಹೊಂದಿದ್ದರೂ ಕೂಡ ಮುಂಗಾರು ಬಿತ್ತನೆಗೆ ಇದು ಸೂಕ್ತ ಸಮಯವಲ್ಲ. ಈಗ ದಿನದಿಂದ ದಿನಕ್ಕೆ ಉಷ್ಣಾಂಶದ ಪ್ರಮಾಣ ಹೆಚ್ಚಾಗುತ್ತಿರುವುದರ ಜೊತೆಗೆ ಮುಂಗಾರು ಮಾನ್ಸೂನ್‌ಗಳು ಸ್ವಲ್ಪ ತಡವಾಗಿ ರಾಜ್ಯಕ್ಕೆ ಆಗಮಿಸುವ ಸೂಚನೆ ಇದೆ. ಇವೆಲ್ಲ ಪರಿಗಣಿಸಿ ರೈತರು ಸದ್ಯ ಬಿತ್ತನೆಗೆ ಮುಂದಾಗದೆ ಮುಂದೂಡಿ ಸಂಪೂರ್ಣ ಮಳೆಯಾಗಿ ಉತ್ತಮ ತೇವಾಂಶ ಕಂಡು ಬಂದಾಗ ಮಾತ್ರ ಬಿತ್ತನೆ ಮಾಡುವದು ಸೂಕ್ತ. ಇದರಿಂದ ಬೆಳೆಯ ಮೊಳಕೆಯ ಪ್ರಮಾಣ ಹೆಚ್ಚಾಗಿ ಆರೋಗ್ಯಕರ ಬೆಳವಣಿಗೆಗೆ ಸಹಾಯವಾಗುತ್ತದೆ ಎಂದು ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ