Breaking News

ಕಲಬುರಗಿ: ಕಮಲಾಪುರ ಬಳಿ ಭೀಕರ ಬಸ್ ದುರಂತ; ನಾಲ್ವರ ಸಜೀವ ದಹನ

Spread the love

ಕಲಬುರಗಿ: ಕಮಲಾಪುರ ತಾಲೂಕಿನ ಹೊರವಲಯದಲ್ಲಿ ಭೀಕರ ಬಸ್​ ದುರಂತ ಸಂಭವಿಸಿದ್ದು, ಸುಮಾರು ನಾಲ್ವರು ಪ್ರಯಾಣಿಕರು ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ.

ತೆಲಂಗಾಣದ ಹೈದರಬಾದ್‌ನಿಂದ ಗೋವಾಕ್ಕೆ ಮೂರು ಕುಟುಂಬಗಳ 29 ಜನ ಪ್ರವಾಸಕ್ಕೆ ತೆರಳಿದ್ದರು.

ಅಲ್ಲಿಂದ ಮರಳುವಾಗ ಅಪಘಾತ ಸಂಭವಿಸಿದೆ. ಗೂಡ್ಸ್ ಲಾರಿ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಖಾಸಗಿ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವು ವರದಿಗಳ ಪ್ರಕಾರ ಬಸ್​ನಲ್ಲಿ 20ಕ್ಕೂ ಹೆಚ್ಚು ಜನ ಪ್ರಯಾಣಿಕರು ಇದ್ದರು. ಗೋವಾದಿಂದ ಹೈದ್ರಾಬಾದ್​ಗೆ ಖಾಸಗಿ ಬಸ್ ತೆರಳುತ್ತಿತ್ತು ಎನ್ನಲಾಗಿದೆ.

22 ಜನರನ್ನು ಬಸ್‌ನಿಂದ ಹೊರ ಬಂದಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಟೆಂಪೊ ಚಾಲಕನ ಎರಡೂ ಕಾಲುಗಳು ತುಂಡಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ