Breaking News

ಚಾಕ್ಲೇಟ್ ಆಸೆ ತೋರಿಸಿ 2 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ

Spread the love

ರಾಮನಗರ: ಚಾಕ್ಲೇಟ್ ಕೊಡಿಸ್ತೀನೆಂದು ಕರೆದುಕೊಂಡು ಹೋಗಿ 2 ವರ್ಷದ ಪುಟ್ಟ ಕಂದಮ್ಮನ ಮೇಲೆ ಆಕೆಯ ದೊಡ್ಡಪ್ಪನೇ ಅತ್ಯಾಚಾರ ಎಸಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಆರೋಪಿಯನ್ನು ಸಾದಿರ್ ಪಾಷಾ (28) ಎಂದು ಗುರುತಿಸಲಾಗಿದೆ. ಆರೋಪಿ ಪಾಷಾ ಗುರುವಾರ ಮಧ್ಯಾಹ್ನ ಚಾಕ್ಲೇಟ್ ಕೊಡಿಸುವುದಾಗಿ ಹೇಳಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಇತ್ತ ತಡರಾತ್ರಿ ಆದರೂ ಮಗುವನ್ನು ಮನೆಗೆ ಕರೆದುಕೊಂಡು ಬಾರದ ಹಿನ್ನೆಲೆಯಲ್ಲಿ ಮಗುವಿನ ಪೋಷಕರು ಆತಂಕಗೊಂಡಿದ್ದಾರೆ. ಅಲ್ಲದೆ ಮಗುವನ್ನು ಈ ಕೂಡಲೇ ಮನೆಗೆ ಕರೆದುಕೊಂಡು ಬರುವಂತೆ ಹೇಳಿದ್ದಾರೆ.

ಅಂತೆಯೇ ಪಾಷಾ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಬಾಲಕಿಯನ್ನು ಮನೆಗೆ ಕರೆದುಕೊಂಡು ಬಂದಿದ್ದಾನೆ. ಈ ವೇಳೆ ಮಗುವಿನ ಬಟ್ಟೆಯಲ್ಲಿ ರಕ್ತದ ಕಲೆ, ಮೈಮೇಲೆ ಗಾಯಗಳನ್ನು ಕಂಡು ಪೋಷಕರು ಗಾಬರಿಗೊಂಡಿದ್ದಾರೆ. ಕೂಡಲೇ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. 


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ