Breaking News

ನನ್ನ ಅಣ್ಣಂದಿರಿಗೆ ಇನ್ನೂ ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲ. ನನಗೂ ಹೆಣ್ಣು ಸಿಗುವುದಿಲ್ಲ ಎಂದು ರೈತ ಆತ್ಮಹತ್ಯೆ

Spread the love

ಚಿಕ್ಕೋಡಿ: ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗಲಿಲ್ಲ ಎಂಬ ಕಾರಣಕ್ಕೆ ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕರಗುಪ್ಪಿ ಯಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ತನ್ನ ಜಮೀನಿನ ಮಾವಿನ ಮರಕ್ಕೆ ನೇಣು ಹಾಕಿಕೊಂಡು ರಮೇಶ್ ಬಾಳಪ್ಪ ಪಾಟೀಲ್ (25) ಸಾವನ್ನಪ್ಪಿದ್ದಾನೆ. ಮನೆಯಲ್ಲಿ ತನ್ನ ಹಿರಿಯ ಇಬ್ಬರು ಸಹೋದರರು ಬಹುದಿನಗಳಿಂದ ಮದುವೆ ಮಾಡಿಕೊಳ್ಳಲು ಹೆಣ್ಣು ಹುಡುಕುತ್ತಿದ್ದರು ಅವರಿಗೆ ಇನ್ನೂ ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲ. ನನ್ನ ಅಣ್ಣಂದಿರಿಗೆ ಇನ್ನೂ ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲ. ನನಗೂ ಹೆಣ್ಣು ಸಿಗುವುದಿಲ್ಲ ಎಂದು ಮನಸ್ಸಿಗೆ ನೋವು ಮಾಡಿಕೊಂದು ತನ್ನ ಜಮೀನಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. 


Spread the love

About Laxminews 24x7

Check Also

ನಾನು ಹುಟ್ಟು ಕಾಂಗ್ರೆಸಿಗ, ಬಿಜೆಪಿ – ಆರ್​​ಎಸ್​​ಎಸ್ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ: ಡಿಸಿಎಂ

Spread the loveಬೆಂಗಳೂರು : ನಾನು ಅಪ್ಪಟ ಕಾಂಗ್ರೆಸಿಗ. ಹುಟ್ಟಿನಿಂದ ಕಾಂಗ್ರೆಸ್​ ಪಕ್ಷದಲ್ಲಿದ್ದೇನೆ. ಜೀವ ಇರುವ ತನಕವೂ ಕಾಂಗ್ರೆಸಿಗನಾಗಿಯೇ ಇರುತ್ತೇನೆ. ನನ್ನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ