ಗದಗ: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆಯೇ ಕಿಡಿಗೇಡಿಗಳು ಹಲ್ಲೆ ನಡೆಸಿದ ಪ್ರಕರಣವೊಂದು ವರದಿಯಾಗಿದೆ. ಗದಗ ಜಿಲ್ಲೆಯಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ನಾಲ್ವರು ಬೈಕ್ ಸವಾರರು ಈ ದುಷ್ಕೃತ್ಯ ನಡೆಸಿದ್ದಾರೆ.
ಗದಗದ ಬೆಟಗೇರಿ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಅಶೋಕ್ ದಾನಿ ಹಲ್ಲೆಗೊಳಗಾದವರು.
ಗದಗ-ಬಾದಾಮಿ ರಸ್ತೆಯ ಜನನಿಬಿಡ ಪ್ರದೇಶದಲ್ಲಿ ಅಡ್ಡಾದಿಡ್ಡಿಯಾಗಿ ಬೈಕ್ ಓಡಿಸಿದ್ದಕ್ಕೆ ತಡೆದು ಬುದ್ಧಿವಾದ ಹೇಳಿದ್ದಕ್ಕೆ ಅವರು ಪೊಲೀಸ್ ಸಿಬ್ಬಂದಿ ಮೇಲೆಯೇ ಕೈ ಮಾಡಿದ್ದಾರೆ.
ಈ ಕುರಿತು ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಿಶೋರ್ ಕುಮಾರ್ ಕದಂ (22), ಮಾರುತಿ ಮುತಗಾರ (65), ಪ್ರಭಾಕರ್ ಶೇಷಪ್ಪನವರ್ (24) ಬಂಧಿತ ಆರೋಪಿಗಳು. ಪ್ರಮುಖ ಆರೋಪಿ ಕಿಶೋರ್ ಕುಮಾರ್ ಕದಂ (22) ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.