ಚಿಕ್ಕೋಡಿ(ಬೆಳಗಾವಿ): ವಿಷಕಾರಿ ಹಾವು ಕಚ್ಚಿ ಮಗುವೊಂದು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯರನಾಳ ಗ್ರಾಮದಲ್ಲಿ ನಡೆದಿದೆ.
ಇಶಾಂತ್ ರಾಘವೇಂದ್ರ ಕಾಂಬಳೆ (04) ಮೃತ ಮಗು. ಯರನಾಳ ಗ್ರಾಮದಲ್ಲಿ ನಿನ್ನೆ ರಾತ್ರಿ ಮಗು ಮನೆಯಲ್ಲಿ ಮಲಗಿದ್ದಾಗ ವಿಷಪೂರಿತ ಹಾವು ಕಚ್ಚಿದ ಪರಿಣಾಮ ಮಗು ಸಾವನ್ನಪ್ಪಿದೆ. ಹಾವು ಕಚ್ಚಿದ ಪರಿಣಾಮ ಮಗು ಅಳಲು ಆರಂಭಿಸಿದಾಗ ಮಗುವನ್ನು ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ.ಮಗು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.