Breaking News

ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಪಕ್ಷದಲ್ಲಿ ಅನೇಕ ಬದಲಾವಣೆ ಗಳಾಗಿವೆ:ಗಣೇಶ ಹುಕ್ಕೇರಿ

Spread the love

ಚಿಕ್ಕೋಡಿ: ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮನೆಗೂ ತೆರಳಿ ಜನರ ಆರೋಗ್ಯ ಹಾಗೂ ಕೊರೊನಾ ಬಗ್ಗೆ ಮಾಹಿತಿ ನೀಡಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಲ್ಲಿ ಸಂಘಟನೆ ಮಾಡಲಾಗುವುದು ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು.

ಪಟ್ಟಣದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಚಿಕ್ಕೋಡಿ-ಸದಲಗಾ ವಿಧಾನಸಭಾ ಮತದಾರರ ಸಂಘ ಇವರ ಸಹಯೋಗದಲ್ಲಿ ಬುಧವಾರ  ‘ಆರೋಗ್ಯ ಹಸ್ತ’ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಪಕ್ಷದಲ್ಲಿ ಅನೇಕ ಬದಲಾವಣೆ ಗಳಾಗಿವೆ. ಪಕ್ಷವನ್ನು ಬೇರು ಮಟ್ಟದಿಂದಲೇ ಸಂಘಟನೆ ಮಾಡಲಾಗುತ್ತಿದೆ ಎಂದು ಹೇಳಿದರು.

ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಅವರು, ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಈ ಭಾಗದಲ್ಲಿ ಹೆಚ್ಚಿನ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಲಾಗುವದು ಎಂದರು.

ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ಲಕ್ಷ್ಮಣರಾವ ಚಿಂಗಳೆ ಮಾತನಾಡಿ, ಕೊರೊನಾ ಸಂಕಷ್ಟದಲ್ಲಿರುವ ಜನರಲ್ಲಿ ಧೈರ್ಯ ತುಂಬುವ ಕಾರ್ಯ ಮಾಡಬೇಕು. ಆ ಕಾರ್ಯವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಜತೆಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ  ಮಾಡಲಾಗುತ್ತಿದೆ ಎಂದು ಹೇಳಿದರು.

ಮಾಜಿ ಸಚಿವ ವೀರಕುಮಾರ ಪಾಟೀಲ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕ ಅಧ್ಯಕ್ಷೆ ತೇಜಸ್ವಿನಿ ನಾಯಿಕವಾಡಿ, ಮಹಾವೀರ ಮೋಹಿತೆ, ರವಿ ಪಾಟೀಲ, ಗುಲಾಬಹುಸೇನ ಬಾಗವಾನ ಮುಂತಾದವರು ಉಪಸ್ಥಿತರಿದ್ದರು. ಚಿಕ್ಕೋಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ ಕುಲಕರ್ಣಿ ಸ್ವಾಗತಿಸಿದರು.


Spread the love

About Laxminews 24x7

Check Also

ಸೌಕರ್ಯ, ಸಿಬ್ಬಂದಿ: ಕೊರತೆ ಆಸ್ಪತ್ರೆಗೇ ಬೇಕಿದೆ ಚಿಕಿತ್ಸೆ!

Spread the love ಚಿಕ್ಕೋಡಿ: ಪಟ್ಟಣದ ಹೊರವಲಯದಲ್ಲಿ ₹20 ಕೋಟಿ ವೆಚ್ಚದಲ್ಲಿ ಐದು ಎಕರೆಯಲ್ಲಿ ತಲೆ ಎತ್ತಿರುವ ತಾಯಿ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ