Breaking News

ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಆಗಿದೆ ಆದರೆ ರದ್ದು ಮಾಡಿಲ್ಲ:ಬೊಮ್ಮಾಯಿ

Spread the love

ಚಿತ್ರದುರ್ಗ, ಜೂ.4: ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಆಗಿದೆ ಆದರೆ ರದ್ದು ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ದೇವರ ಕೊಟ್ಟ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ಹೊಸ ಸಮಿತಿ ರಚನೆಯ ಅವಶ್ಯಕತೆ ಇಲ್ಲ.

ನಮ್ಮದು ಬಸವ ಪಥದ ಸರ್ಕಾರ ಎಂದು ಮೊದಲೇ ಹೇಳಿದ್ದೇನೆ ಎಂದು ತಿಳಿಸಿದರು.

ಇನ್ನು ಬಸವಣ್ಣನವರು ರಚಿಸಿದ ಹಲವಾರು ಅತ್ಯುತ್ತಮ ವಚನಗಳಿವೆ. ಬಸವಣ್ಣನವರ ಪಠ್ಯದಲ್ಲಿ ಒಂದು ಲೈನ್ ವ್ಯತ್ಯಾಸವಾಗಿದೆ. ಉಳಿದಂತೆ ಬರಗೂರು ಸಮಿತಿ ರಚಿಸಿದ್ದ ಪಠ್ಯದಲ್ಲಿ ಇದ್ದಂತೆ ಇದೆ ಎಂದರು. ಬಸವಣ್ಣನವರ ಪಠ್ಯದ ವ್ಯತ್ಯಾಸ ಸರಿಪಡಿಸಲಾಗುವುದು. ನಾನಾ ಮಠಗಳ ಸ್ವಾಮೀಜಿಗಳ ಜೊತೆಗೆ ಚರ್ಚಿಸಿ ಅವರಿಗೆ ಇರುವ ಊಹಾ ಪೋಹಗಳನ್ನು ಸರಿ ಪಡಿಸಿದ್ದೇವೆ. ಆದಷ್ಟು ಶೀಘ್ರದಲ್ಲಿ ಮಕ್ಕಳಿಗೆ ಪಠ್ಯ ಪುಸ್ತಕ ಒದಗಿಸುತ್ತೇವೆ.


Spread the love

About Laxminews 24x7

Check Also

ಖಾಸಗಿ ಲಾಡ್ಜ್​​ನಲ್ಲಿ ಪಿಎಸ್​ಐ ಆತ್ಮಹತ್ಯೆ

Spread the love ತುಮಕೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪೊಲೀಸ್​​ ಸಬ್ ಇನ್ಸ್​ಪೆಕ್ಟರ್​​ವೊಬ್ಬರು ನಗರದ ಖಾಸಗಿ ಲಾಡ್ಜ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ