ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಜೂನ್ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೂರು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಇಂದು ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.