Breaking News

ಮುಂದಿನ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ನಾಯಕತ್ವ ಕೊಟ್ಟರೆ ಕಾಂಗ್ರೆಸ್‌ ಜತೆಗೆ ಕೈ ಜೋಡಿಸುವ ಬಗ್ಗೆ ಯೋಚಿಸಲಾಗುವುದು:H.D.K.

Spread the love

ಬೆಳಗಾವಿ: ಮುಂದಿನ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ನಾಯಕತ್ವ ಕೊಟ್ಟರೆ ಕಾಂಗ್ರೆಸ್‌ ಜತೆಗೆ ಕೈ ಜೋಡಿಸುವ ಬಗ್ಗೆ ಯೋಚಿಸಲಾಗುವುದು ಎಂದು ಎಚ್‌. ಡಿ. ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಖರ್ಗೆ ಹಿರಿಯ ನಾಯಕರು.

ಆ ಪಕ್ಷಕ್ಕೆ ನಿಷ್ಠೆ ಯಿಂದ ಕೆಲಸ ಮಾಡಿದ್ದಾರೆ. ಹಲವು ಬಾರಿ ಅವರಿಗೆ ಅನ್ಯಾಯ ಆಗಿದ್ದರೂ ನಿಷ್ಠೆಯಿಂದ ನಡೆದುಕೊಂಡಿದ್ದಾರೆ ಎಂದರು.

ಪ್ರವಾಹದಲ್ಲಿ ಮನೆ ಬಿದ್ದವರಿಗೆ ಇನ್ನೂ ಮನೆ ನಿರ್ಮಿಸಿ ಕೊಟ್ಟಿಲ್ಲ. ಕೊಡಗು, ಚಿಕ್ಕಮಗಳೂರಿನಲ್ಲಿ ಮನೆ ಕಟ್ಟಲಿಲ್ಲ. ಪ್ರಚಾರ ಮಾತ್ರ ದೊಡ್ಡ ದೊಡ್ಡ ಜಾಹೀರಾತುಗಳ ಮೂಲಕ ಮಾಡಿಕೊಂಡಿದ್ದಾರೆ.

ನರೇಂದ್ರ ಮೋದಿ ಗಿಂತಲೂ ದೊಡ್ಡ ಮಟ್ಟದ ಘೋಷಣೆ ಮಾಡಿಕೊಂಡರು. ನವ ಕರ್ನಾಟಕ ಕಟ್ಟುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ರಾಜ್ಯದ ಖಜಾನೆಯನ್ನು ಹಿಟಾಚಿ ಮೂಲಕ ಬಗೆಯುವುದೇ ನವ ಕರ್ನಾಟಕ ನಿರ್ಮಾಣವೇ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ