Breaking News

ಸಾಂತ್ವನ ಕೇಂದ್ರದಲ್ಲಿ ಗಲಾಟೆ, ಪೊಲೀಸ್ ವಾಹನದಲ್ಲಿ ಮಾತುಕತೆ………

Spread the love

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಈಗಾಗಲೇ ಸಿಸಿಬಿ ತನಿಖೆ ಎದುರಿಸುತ್ತಿದ್ದಾರೆ. ಮೊನ್ನೆಯಷ್ಟೇ ಸಾಂತ್ವನ ಕೇಂದ್ರದಲ್ಲಿ ಇಬ್ಬರ ಮಧ್ಯೆ ಗಲಾಟೆ ನಡೆದಿತ್ತು ಎಂದು ಮೂಲಗಳು ತಿಳಿಸಿತ್ತು. ಆದರೆ ಇಂದು ಈ ಇಬ್ಬರು ನಟಿಯರ ನಡುವೆ ಫ್ರೆಂಡ್‍ಶಿಪ್ ಆದ ಪ್ರಸಂಗ ನಡೆಯಿತು.

ಹೌದು. ವಿಚಾರಣೆ ನಡೆಸುತ್ತಿರುವಾಗ ಈ ಇಬ್ಬರು ನಟಿಯರೂ ಪದೇ ಪದೇ ಅನಾರೋಗ್ಯದ ನೆಪವೊಡ್ಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂದು ಇಬ್ಬರ ಆರೋಗ್ಯ ತಪಾಸಣೆಗಾಗಿ ನಗರದ ಕೆ.ಸಿ ಜನರಲ್ ಆಸ್ಪತ್ರೆಗೆ ಪೊಲೀಸರು ಕರೆದೊಯ್ದಿದ್ದರು.ತನಿಖೆಯ ವೇಳೆ ಹುಷಾರಿಲ್ಲ ಎಂದು ಹಲವು ಬಾರಿ ಹೇಳಿದ್ದರಿಂದ ಇವರೇನೂ ನಕ್ರಾ ಮಾಡುತ್ತಿದ್ದರಾ ಅಥವಾ ನಿಜ ಹೇಳುತ್ತಿದ್ದಾರೋ ಎಂದು ಪರೀಕ್ಷಿಸಲು ಪೊಲೀಸರು ಚೆಕಪ್ ಗಾಗಿ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಪರೀಕ್ಷೆಯ ವೇಳೆ ಇಬ್ಬರ ಬಿಪಿ ನಾರ್ಮಲ್ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿತ್ತು.

ಆರೋಗ್ಯ ತಪಾಸಣೆಯ ಬಳಿಕ ಇಬ್ಬರನ್ನೂ ಅದೇ ಪೊಲೀಸ್ ವಾಹನದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕರೆದೊಯ್ಯಲಾಯಿತು. ಈ ವೇಳೆ ನಟಿಯರಿಬ್ಬರು ಪೊಲೀಸ್ ವಾಹನದಲ್ಲಿ ಮಾತುಕತೆ ನಡೆಸಿದರು. ಪೊಲೀಸ್ ವಾಹನದಲ್ಲಿ ರಾಗಿಣಿ- ಸಂಜನಾ ಇಬ್ಬರ ಮಧ್ಯೆ ಮುಕ್ತವಾಗಿ ಸಂಭಾಷಣೆ ನಡೆದಿದೆ.


Spread the love

About Laxminews 24x7

Check Also

ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಬೇಕು, ಸಿಎಂ, ಸಚಿವರು ಏನೂ ಮಾತನಾಡಿಲ್ಲ: ಹೆಚ್.ಎಂ ರೇವಣ್ಣ

Spread the loveಬೆಂಗಳೂರು: ಗ್ಯಾರಂಟಿ ಯೋಜನೆಗಳ  ಪರಿಷ್ಕರಣೆ ಮಾಡುತ್ತೇವೆ, ಆದರೆ ಸಿಎಂ, ಸಚಿವರು ಇನ್ನೂ ಈ ಬಗ್ಗೆ ಮಾತನಾಡಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ