Breaking News

ಸಲ್ಮಾನ್ ಖಾನ್​ಗೆ ಕೊಲೆ ಬೆದರಿಕೆ ಪ್ರಕರಣ; ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿಚಾರಣೆ

Spread the love

ತ್ತೀಚೆಗೆ ಕೊಲೆಯಾದ ಸಿಧು ಮೂಸೆವಾಲಾ ಪ್ರಕರಣಕ್ಕೂ ಲಾರೆನ್ಸ್​ಗೂ ನಂಟಿದೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ‘ಮೂಸೆವಾಲಾ ರೀತಿ ನಿಮ್ಮನ್ನು ಹತ್ಯೆ ಮಾಡುತ್ತೇವೆ’ ಎನ್ನುವ ಬೆದರಿಕೆ ಸಲ್ಲುಗೆ ಬಂದಿದೆ. ಈ ಕಾರಣಕ್ಕೆ ಲಾರೆನ್ಸ್​ನನ್ನು ವಿಚಾರಣೆ ಮಾಡಲಾಗುತ್ತಿದೆ.

ನಟ ಸಲ್ಮಾನ್ ಖಾನ್ (Salman Khan) ಹಾಗೂ ಅವರ ತಂದೆ ಸಲೀಮ್ ಖಾನ್​ಗೆ (Salim Khan) ಕೊಲೆ ಬೆದರಿಕೆ ಬಂದಿದೆ. ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಈ ಬೆದರಿಕೆ ಬೆನ್ನಲ್ಲೇ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಮಧ್ಯೆ, ಈ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ಗ್ಯಾಂಗ್​​ಸ್ಟರ್ಲಾರೆನ್ಸ್ ಬಿಷ್ಣೋಯ್​​ನನ್ನು ವಿಚಾರಣೆ ಮಾಡಲಾಗುತ್ತಿದೆ. ಈ ಪ್ರಕರಣಕ್ಕೂ ಅವನಿಗೂ ಏನಾದರೂ ಸಂಬಂಧವಿದೆಯಾ ಎನ್ನುವ ನಿಟ್ಟಿನಲ್ಲಿ ತನಿಖೆ ಮಾಡಲಾಗುತ್ತಿದೆ.

ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಲು 2011ರಲ್ಲಿ ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್ ಪ್ಲ್ಯಾನ್ ರೂಪಿಸಿದ್ದ. ‘ರೆಡಿ’ ಸಿನಿಮಾದ ಶೂಟಿಂಗ್ ಸಂದರ್ಭದಲ್ಲೇ ಕೊಲ್ಲಲು ಪ್ರಯತ್ನ ನಡೆದಿತ್ತು. ಆದರೆ, ಈ ಪ್ಲ್ಯಾನ್ ವಿಫಲವಾಗಿತ್ತು. ಇತ್ತೀಚೆಗೆ ಕೊಲೆಯಾದ ಸಿಧು ಮೂಸೆವಾಲಾ ಪ್ರಕರಣಕ್ಕೂ ಲಾರೆನ್ಸ್​ಗೂ ನಂಟಿದೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ‘ಮೂಸೆವಾಲಾ ರೀತಿ ನಿಮ್ಮನ್ನು ಹತ್ಯೆ ಮಾಡುತ್ತೇವೆ’ ಎನ್ನುವ ಬೆದರಿಕೆ ಸಲ್ಲುಗೆ ಬಂದಿದೆ. ಈ ಕಾರಣಕ್ಕೆ ಲಾರೆನ್ಸ್​ನನ್ನು ವಿಚಾರಣೆ ಮಾಡಲಾಗುತ್ತಿದೆ.


Spread the love

About Laxminews 24x7

Check Also

ಗೋಮಾಳದಲ್ಲಿ ಅವೈಜ್ಞಾನಿಕ ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಯತ್ನ: ವಿರೋಧಿಸಿ ತಹಶಿಲ್ದಾರ್ ಕಚೇರಿಗೆ ಕುರಿ ನುಗ್ಗಿಸಿ ಪ್ರತಿಭಟನೆ

Spread the loveದಾವಣಗೆರೆ: ಗೋಮಾಳ‌ ಜಾಗವನ್ನು ಸರ್ಕಾರಿ ಕಟ್ಟಡ ನಿರ್ಮಾಣ ಮಾಡಲು ಮಂಜೂರು ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ದಾವಣಗೆರೆ ಜಿಲ್ಲೆಯ ನ್ಯಾಮತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ