Breaking News

ಪ್ರೇಮಿಗಳಿಬ್ಬರು ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ………….

Spread the love

ಯಾದಗಿರಿ: ಅಂತರ್ ಜಾತಿ ಹಿನ್ನೆಲೆ ಮನೆಯಲ್ಲಿ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಯಾದಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ.

ಯಾದಗಿರಿ ತಾಲೂಕಿನ ಗೊಂದಡಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪ್ರೀತಿಗೆ ಪೋಷಕರು ಅಡ್ಡಿಪಡಿಸಿದ್ದರಿಂದ ಪ್ರೇಮಿಗಳು ಗ್ರಾಮದ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹನುಮಂತಪ್ಪ(21), ಮಹಾದೇವಿ (17) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಹನುಮಂತ ಮತ್ತು ಮಹಾದೇವಿ ಕಳೆದ ಎರಡು ವರ್ಷಗಳಿಂದ ಗಾಢವಾಗಿ ಪ್ರೀತಿಸುತ್ತಿದ್ದರು. ಅನ್ಯ ಜಾತಿಯವರಾಗಿದ್ದರಿಂದ, ಹುಡುಗಿಯ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು

ಒಂದು ವಾರದ ಹಿಂದೆ ಮಾಹಾದೇವಿಯ ಮನೆಯವರಿಗೆ ಇವರ ಪ್ರೀತಿಯ ವಿಷಯ ತಿಳಿದಿತ್ತು. ಪೋಷಕರು ಹನುಮಂತನನ್ನು ಪ್ರೀತಿ ಮಾಡುವುದನ್ನು ನಿಲ್ಲಿಸುವಂತೆ ಮಹಾದೇವಿಗೆ ಒತ್ತಾಯ ಮಾಡಿದ್ದರು. ಹೀಗಾಗಿ ಬುಧವಾರ ಗ್ರಾಮದ ಹೊರ ವಲಯದಲ್ಲಿರುವ ಕಲ್ಯಾಣಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವೇಳೆ ಪ್ರೇಮಿಗಳು ತಮ್ಮ ಕುಟುಂಬ ಹಾಗೂ ತಂದೆ, ತಾಯಿಯರ ಕ್ಷಮೆ ಕೇಳಿದ್ದಾರೆ.

ಇಂದು ಇಬ್ಬರ ಮೃತದೇಹಗಳು ನೀರಿನಲ್ಲಿ ಮೇಲೆ ತೇಲಿದಾಗ ಆತ್ಮಹತ್ಯೆ ವಿಚಾರ ಬಹಿರಂಗವಾಗಿದೆ. ಸೈದಾಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಡಿಯೋದಲ್ಲಿ ಹೇಳಿರುವುದೇನು?
ವಿಡಿಯೋದಲ್ಲಿ ಮಾತನಾಡಿರುವ ಪ್ರೇಮಿಗಳು, ಸಾರಿ ಅಮ್ಮ ಮುಂದಿನ ಜನ್ಮದಲ್ಲಿ ನಿನ್ನ ಋಣ ತೀರಿಸುತ್ತೇನೆ. ಸಾರಿ ನನ್ನಿಂದ ತಪ್ಪಾಗಿದೆ, ಐ ಮಿಸ್ ಯು ಅಣ್ಣ. ಎಲ್ಲರನ್ನೂ ಬಿಟ್ಟು ಹೊರಟಿದ್ದೇನೆ ಎಂದು ವಿಡಿಯೋದಲ್ಲಿ ಹುಡುಗ ಹೇಳಿದ್ದಾನೆ. ವಿಡಿಯೋದಲ್ಲಿ ಪ್ರೇಮಿಗಳಿಬ್ಬರೂ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ