ಬೆಳಗಾವಿ: ವಿಧಾನ ಪರಿಷತ್ತಿನ ಶಿಕ್ಷಕರ ಪದವೀಧರರ ಕ್ಷೇತ್ರಗಳ ಚುನಾವಣೆ ಪ್ರಚಾರ ನಿಮಿತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ನಾಳೆ ಬೆಳಗಾವಿಗೆ ಆಗಮಿಸುತ್ತಿದ್ದಾರೆ.
ಜೂನ್ 07 ರಂದು ಬೆಳಗ್ಗೆ 10:30ಕ್ಕೆ ಬೆಳಗಾವಿಯ ರಾಮದೇವ್ ಹೋಟೆಲ್ ಹಿಂಭಾಗದಲ್ಲಿರುವ ಮರಾಠಾ ಮಂಡಲ ಶಿಕ್ಷಣ ಸಂಸ್ಥೆ ಕಾಲೇಜಿನಲ್ಲಿ ಪ್ರಚಾರ ಸಭೆ ಏರ್ಪಡಿಸಲಾಗಿದ್ದು, ಸಭೆಯಲ್ಲಿ ಭಾಗವಹಿಸುವವರು.
ನಂತರ 12:30 ಕ್ಕೆ ಸಂಗೊಳ್ಳಿ ರಾಯಣ್ಣ ವೃತ್ತದ ಹತ್ತಿರ ಇರುವ ಕಾಂಗ್ರೆಸ್ ಭವನದಲ್ಲಿ ಮೂರು ಜಿಲ್ಲೆಗಳ, ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಲ್ಲಾ ಕಾಂಗ್ರೆಸ್ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ 2018ರ ಅಭ್ಯರ್ಥಿಗಳು ಮತ್ತು ಕಾಂಗ್ರೆಸ್ಸಿನ ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಮುಖಂಡರು ಜತೆ ಸಭೆ ನಡೆಸಲಿದ್ದಾರೆ.
Laxmi News 24×7