Breaking News

ರಾಜಾಹುಲಿ ಬೆಳಗಾವಿಗೆ ಎಂಟ್ರಿ

Spread the love

ವಾಯವ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲು ಸೋಮವಾರ ಬೆಳಗಾವಿಗೆ ಆಗಮಿಸಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

 

ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ರಾಜಕೀಯವಾಗಿ ಅವರು ಅವರ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ. ನಾನು ನನ್ನ ಪಕ್ಷದ ಪರವಾಗಿ ಮಾಡುತ್ತೇನೆ. ವಿಮಾನ ನಿಲ್ದಾಣದಲ್ಲಿ ಔಪಚಾರಿಕವಾಗಿ ಮಾತುಕತೆ ಮಾಡಿದ್ದೇವೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ನಾಳೆ, ನಾಡಿದ್ದು ಬಾಗಲಕೋಟ, ವಿಜಯಪುರ ಹಾಗೂ ಬೆಳಗಾವಿಯಲ್ಲಿ ಪ್ರವಾಸ ಮಾಡುತ್ತೇವೆ. ವಾಯುವ್ಯ ಪದವೀಧ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ ೫೦ ಸಾವಿರ ಅಂತರದಲ್ಲಿ ಗೆಲವು ಸಾಧಿಸುತ್ತಾರೆ. ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ಅರುಣ ಶಹಾಪುರ ಅವರು ಅಂತರ ಕಡಿಮೆ ಆಗಬಹುದು. ಅವರು ಗೆಲವು ಸಾಧಿಸುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ಚುನಾವಣೆ ಗೆಲವು ಸಾಧಿಸುತ್ತೇವೆ ಎಂದರು

ಸಿದ್ದರಾಮಯ್ಯನವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದಾಗ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಅವರು ಹುಬ್ಬಳ್ಳಿಗೆ ಚುನಾವಣಾ ಪ್ರಚಾರದ ನಿಮಿತ್ತ ಹೊರಟಿದ್ದಾಗಿ ಹೇಳಿದರೆ ನಾನು ಬೆಳಗಾವಿಗೆ ಹೊರಟಿದ್ದಾಗಿ ತಿಳಿಸಿದೆ. ರಾಜಕೀಯವಾಗಿ ನಾವು ವಿರೋಧಿಗಳು, ವಯಕ್ತಿಕವಾಗಿ ನಮ್ಮ ನಡುವೆ ಉತ್ತಮ ಸ್ನೇಹವಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಯಡಿಯೂರಪ್ಪ-ಸಿದ್ದರಾಮಯ್ಯ ಭೇಟಿ; ಬೆಳಗಾವಿಗೆ ಬರುವ ಮುನ್ನ ಚರ್ಚೆ; ರಾಜಕೀಯ ಕುತೂಹಲ


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ