Breaking News

ಸಿಎಂ ಸ್ಥಾನದಿಂದ BSY ಅವರನ್ನು ಕಿತ್ತು ಹಾಕಿದ್ರು. ಮಗನಿಗೆ ಎಂ ಎಲ್ ಸಿ ಕೊಡಲು ಆಗಲಿಲ್ಲ. ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡಿ ಬಹಳ ದಿನ ಆಯಿತು. : ಸಿದ್ದರಾಮಯ್ಯ

Spread the love

ಬಿಜೆಪಿ ರಾಜ್ಯಾಧ್ಯಕ್ಷರಾದ ನವೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾಗೋಕೆ ಲಾಯಕ್‍ಅಲ್ಲ. ಅವರು ಏನೇನೋ ಬಾಯಿಗೆಬಂದಂಗೆ ಮಾತನಾಡುವ ಅಪ್ರಬುದ್ಧರಾಗಿದ್ದಾರೆ. ಅವರ ಮಾತನ್ನು ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿಯಲ್ಲಿ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಮೋದಿ ಸಾಧನೆ ನೋಡಿ ಬಿಜೆಪಿಗೆ ಮತ ಹಾಕ್ತಾರೆ ಎಂಬ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಪೆಟ್ರೋಲಿಯಂ ಬೆಲೆ ಹೆಚ್ಚಾಗಿರೋದು ಒಳ್ಳೆಯದಾ. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಒಳ್ಳೆಯದಾ. ಜನರನ್ನು ಸಾಲದ ಸುಳಿಗೆ ಸಿಲುಕಿ ಸಿದ್ದ ಅದರ ಅದು ಒಳ್ಳೆಯದಾ.

ದೇಶದಲ್ಲಿ ಸಾಲದ ಪ್ರಮಾಣ ತೀವ್ರ ಹೆಚ್ಚಳವಾಗಿದೆ ಇದೆಲ್ಲಾ ಒಳ್ಳೆಯದಾ ಎಂದು ಪ್ರಶ್ನೆ ಮಾಡಿದರು. ಇದೇ ವೇಳೆ ನಳೀನ ಕುಮಾರ್ ಕಟೀಲ್ ವಿರುದ್ಧ ಪ್ರತಿಕ್ರಿಯೆ ನೀಡಿದ ಅವರು, ಕಟಿಲ್ ಬಿಜೆಪಿ ಅಧ್ಯಕ್ಷರಾಗೋಕೆ ಲಾಯಕ್ ಅಲ್ಲ. ಏನ್ ಏನೋ ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ. ಅವರ ಮಾತನ್ನು ಗಂಭೀರವಾಗಿ ಪರಿಗಣಿಸಬೆಕಿಲ್ಲ. ಕಟಿಲ್ ಪ್ರಭುದ್ಧ ರಾಜಕಾರಣಿ ಅಲ್ಲ. ಕಟಿಲ್ ನಮ್ಮ ವಿರೋಧಿ ಅವರು ಹೇಳಿದ ಆಧಾರದ ರಹಿತ ಆರೋಪವನ್ನು ಕಟಿಲ್ ಮಾಡುತ್ತಿದ್ದಾರೆ. ಕಟಿಲ್ ಸುಳ್ಳು ಹೇಳುತ್ತಿದ್ದಾರೆ ಎಂದರು.

 

ಇದೇ ವೇಳೆ ಪಠ್ಯ ಪುಸ್ತಕದಲ್ಲಿನ ಲೋಪದೋಷಗಳನ್ನು ಕುರಿತಂತೆ ಮಾತನಾಡಿದ ಅವರು, ಉದ್ದೇಶ ಪೂರ್ವಕವಾಗಿ ಪಠ್ಯದಲ್ಲಿ ಅನೇಕ ತಪ್ಪು ಮಾಡಿದ್ದಾರೆ. ಅಂಬೇಡ್ಕರ್ ಬಗ್ಗೆ ಚರಿತ್ರೆಯ ಅಗತ್ಯತೆ ಇದೆ. ಸಂವಿಧಾನ ಶಿಲ್ಪಿ ಅನ್ನೋದನ್ನು ತಗೆದು ಹಾಕಿದ್ರೆ ಹೇಗೆ. ಕುವೆಂಪು ಫೆÇೀಟೋ ತೆಗೆದು ಹಾಕಿದ್ರೆ ಅವಮಾನ ಅಲ್ಲವೆ. ನಾರಾಯಣಗುರು, ಬಸವಣ್ಣ, ಸುರಪುರ ನಾಯಕರನ್ನು ಅವಮಾನ ಮಾಡಿ, ಪಠ್ಯವನ್ನು ಕೇಸರಿಕರಣ ಮಾಡಲು ಹೋರಟಿದ್ದಾರೆ. ವಿದ್ಯಾರ್ಥಿಗಳಿಗೆ ವೈಚಾರಿಕ ಶಿಕ್ಷಣ ಸಿಗಬೇಕು. ಆದರೆ ಬಿಜೆಪಿ ಇತಿಹಾಸ ತಿರುಚುವ ಕೆಲಸ ಮಾಡಬಾರದು. ಮುಖ್ಯಮಂತ್ರಿ, ಶಿಕ್ಷಣ ಸಚಿವರು ತಪ್ಪು ತಿದ್ದುತ್ತೇವೆ ಎಂದಿದ್ದಾರೆ. ಅಂದ ಮೇಲೆ ನಾವೆಲ್ಲಿ ರಾಜಕೀಯ ಮಾಡುತ್ತಿದ್ದೇವೆ ಎಂದು ಪ್ರಶ್ನೆ ಮಾಡಿದರು. ಸಂವಿಧಾನದ ಕರಡು ರಚನಾ ಸಮಿತಿ ಅಧ್ಯಕ್ಷರಾಗಿದ್ದು ಅಂಬೇಡ್ಕರ್. ಅದನ್ನು ನಮ್ಮ ಮಕ್ಕಳಿಗೆ ಹೇಳದೆ ಇದ್ರೆ ಹೇಗೆ. ಇನ್ನು ಪಠ್ಯಪುಸ್ತಕದಲ್ಲಿನ ಲೋಪಗಳನ್ನು ತಿದ್ದದೇ ಸಮಿತಿ ವಿಸರ್ಜನೆ ಮಾಡಿ, ಪಠ್ಯ ಮುಂದುವರೆಸಿದ್ರೆ ಹೇಗೆ. ವೈಚಾರಿಕ, ವೈಜ್ಞಾನಿಕ ಮನೋಭಾವ ಇರೋ ವ್ಯಕ್ತಿಯನ್ನು ನೇಮಕ ಮಾಡಬೇಕು ಎಂದರು.

 


Spread the love

About Laxminews 24x7

Check Also

ತಾಯಿಯೊಂದಿಗೆ ಚಿನ್ನದ ಹುಡುಗ ಕಾರ್ತಿಕ್

Spread the loveಬೆಳಗಾವಿ: ತಾಯಿ ಟೈಲರಿಂಗ್ ಕೆಲಸ ಮಾಡುತ್ತಾರೆ. ತಂದೆ ಇಲ್ಲ. ತಾಯಿಗೆ-ಮಗ, ಮಗನಿಗೆ-ತಾಯಿನೇ ಎಲ್ಲಾ. ಮನೆಯಲ್ಲಿ ಬಡತನ ಹಾಸು ಹೊಕ್ಕಾಗಿತ್ತು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ