ಬೆಳಗಾವಿ : ಸಮ್ಮಿಶ್ರ ಸರ್ಕಾರ ಪತನಕ್ಕೆ ಡ್ರಗ್ಸ್ ಮಾಫಿಯಾ ಕಾರಣ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮೀ ಹೇಳಿಕೆಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ.
ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕುಣಿಯೋಕೆ ಬಾರದವರು, ನೆಲ ಡೊಂಕು ಎಂಬ ಗಾದೆಯಂತಾಗಿದೆ. ಸಮ್ಮಿಶ್ರ ಸರ್ಕಾರ ಪತನಕ್ಕೆ ಡ್ರಗ್ಸ್ ಮಾಫಿಯಾ ಬಂದ ಹಣದಿಂದ ಕಾರಣ ಎಂದು ಹೇಳಿಕೆ ನೀಡಿದ್ದಾರೆ. ಇಷ್ಟು ದಿನ ಏಕೆ ಬಾಯಿ ಮುಚ್ಚಕೊಂಡ ಇದ್ರು ಎಂದು ವ್ಯಂಗ್ಯವಾಡಿದರು.
ಅಧಿಕಾರದ ವೈಫಲ್ಯದಿಂದ ಮೈತ್ರಿ ಸರ್ಕಾರ ಬಿದ್ದಿದೆ. ಹೊರತು ಅವರು ಹೇಳಿದಂತೆ ಯಾವುದೇ ರೀತಿ ಇಲ್ಲ ಎಂದು ಹೇಳಿದರು.
ಡ್ರಗ್ಸ್ ಮಾಫಿಯಾದಲ್ಲಿ ಈಗಾಗಲೇ ಕೆಲವರನ್ನು ಬಂಧಿಸಿ, ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಯಾರೇ ಇದ್ರ ಸಹ ತಪಿಸ್ಥತರಿಗೆ ಶಿಕ್ಷೆಯಾಗಲಿದೆ ಎಂದು ಹೇಳಿದರು.
Laxmi News 24×7