Breaking News

‘ಕಾಂಗ್ರೆಸ್ಸಿನಲ್ಲಿ ಹಿಡಿತ ಸಾಧಿಸುವ ಉದ್ದೇಶದಿಂದ ಸಿದ್ದರಾಮಯ್ಯ ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ.: ಕಟೀಲ್

Spread the love

ಬೆಳಗಾವಿ: ‘ಕಾಂಗ್ರೆಸ್ಸಿನಲ್ಲಿ ಹಿಡಿತ ಸಾಧಿಸುವ ಉದ್ದೇಶದಿಂದ ಸಿದ್ದರಾಮಯ್ಯ ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಕಾಂಗ್ರೆಸ್ಸಿಗರೇ ಮುಜುಗರಕ್ಕೆ ಒಳಗಾಗಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

 

ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಒಳಜಗಳದಿಂದ ಕಾಂಗ್ರೆಸ್ಸಿಗರ ಆತ್ಮವಿಶ್ವಾಸ ಕುಗ್ಗಿದೆ. ಹೀಗಾಗಿ ಪಕ್ಷ ಬಿಟ್ಟು ಹೋಗುವವರ ಸಂಖ್ಯೆ ಹೆಚ್ಚುತ್ತಿದೆ’ ಎಂದರು.

‘ಕಾಂಗ್ರೆಸ್ ಚಿಂತನಾ ಶಿಬಿರ ಮುಗಿದ ಮೇಲೆ 60ಕ್ಕೂ ಹೆಚ್ಚು ರಾಷ್ಟ್ರಮಟ್ಟದ ನಾಯಕರು ಆ ಪಕ್ಷ ತೊರೆದಿದ್ದಾರೆ. ರಾಜ್ಯದಲ್ಲಿ ಕೂಡ ಇದೇ ಸ್ಥಿತಿ ಇದೆ. ಈಗಾಗಲೇ ಮುಖ್ಯಮಂತ್ರಿ ಚಂದ್ರು, ಬ್ರಿಜೀಶ್ ಕಾಳಪ್ಪ, ಸುದರ್ಶನ್ ಅವರಂಥ ಹಿರಿಯ ನಾಯಕರು ಕೂಡ ಪಕ್ಷದಿಂದ ಕಾಲು ಹೊರಗಿಟ್ಟಿದ್ದಾರೆ’ ಎಂದೂ ಕಟೀಲ್ ಹೇಳಿದರು.


Spread the love

About Laxminews 24x7

Check Also

ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

Spread the love ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌* *ಗ್ರಾಮೀಣ ಕ್ಷೇತ್ರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ